ಕೆಆರ್‌ಎಸ್ ಪಕ್ಷದ ನೂತನ ಜಿಲ್ಲಾ ಸಮಿತಿ ರಚನೆ

KRS Logo
Published on

ಹಾವೇರಿ: ಕರ್ನಾಟಕ ರಾಷ್ಟ್ರ ರಕ್ಷಣಾ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಸಲಹೆ ಮೇರೆಗೆ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲಾಧ್ಯಕ್ಷರಾಗಿ ವಿಶ್ವನಾಥ ರಡ್ಡೇರ, ಪ್ರಧಾನ ಕಾರ್ಯದರ್ಶಿಯಾಗಿ ಯಲ್ಲಪ್ಪ ಕಾಡಶೆಟ್ಟಿಹಳ್ಳಿ ನೇಮಕಗೊಂಡಿದ್ದಾರೆ ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕೃಷ್ಣ ವಿ.ಬಿ. ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀನಿವಾಸ ಬೇಂದ್ರೆ, ಕಾರ್ಯದರ್ಶಿಗಳಾಗಿ ಚರಣರಾಜ ರೊಡ್ಡನವರ, ಶಂಭುಲಿಂಗ ಹುಕ್ಕೇರಿ, ಲೋಕೇಶ ಸುಣಗಾರ, ಧರ್ಮರಾಜ ಬಿಂದಲಗಿ, ಜಂಟಿ ಕಾರ್ಯದರ್ಶಿಯಾಗಿ ನಾಗನಗೌಡ ಅವರನ್ನು ನೇಮಿಸಲಾಗಿದೆ ಎಂದರು.
ನೂತನ ಜಿಲ್ಲಾಧ್ಯಕ್ಷ ವಿಶ್ವನಾಥ ರಡ್ಡೇರ ಮಾತನಾಡಿ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಪದಾಧಿಕಾರಿಗಳ ನೇಮಕ ಮಾಡಲಾಗುವುದು. ಜಿಲ್ಲಾ ಮಟ್ಟದ ಮಹಿಳಾ ಸಮಿತಿ ರಚಿಸಲಾಗುವುದು. ಆ.10ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪಕ್ಷದ ನಾಲ್ಕನೇ ವಾರ್ಷಿಕೋತ್ಸವದಲ್ಲಿ ಜಿಲ್ಲೆಯಿಂದ ಪಾಲ್ಗೊಳ್ಳಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಕೃಷ್ಣಾ ರೆಡ್ಡಿ, ಚರಣರಾಜ ರೊಡ್ಡನವರ, ಯಲ್ಲಪ್ಪ ಕಾಡಶೆಟ್ಟಿಹಳ್ಳಿ, ಶ್ರೀನಿವಾಸ ಬೇಂದ್ರೆ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net