ಕೆಆರ್‌ಎಸ್ ಪಕ್ಷಕ್ಕೆ ಪದಾಧಿಕಾರಿಗಳ ಆಯ್ಕೆ: ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಕೀಲಾರ ಮಾಹಿತಿ

KRS Party Press Conference mandya
Published on

ಮಂಡ್ಯ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮಂಡ್ಯ ತಾಲೂಕು ಘಟಕ ರಚಿಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಕೀಲಾರ ತಿಳಿಸಿದರು.

ಅಧ್ಯಕ್ಷರಾಗಿ ರವೀಂದ್ರ ಕೊತ್ತತ್ತಿ, ಎಸ್.ಜಗದೀಶ್(ಉಪಾಧ್ಯಕ್ಷ), ಎಸ್.ರಾಮಕೃಷ್ಣ(ಪ್ರಧಾನ ಕಾರ್ಯದರ್ಶಿ), ಮಲ್ಲೇಶ್(ಕಾರ್ಯದರ್ಶಿ), ಜಯಪ್ರಕಾಶ್(ಸಂಘಟನಾ ಕಾರ್ಯದರ್ಶಿ), ಮಲ್ಲೇಶ್(ಜಿಲ್ಲಾ ಉಪಾಧ್ಯಕ್ಷ) ಆಯ್ಕೆಯಾಗಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟ ನಡೆಸುತ್ತಿರುವ ಕೆಆರ್‌ಎಸ್ ಪಕ್ಷವು ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಕನ್ನಡ ಶಾಲೆ ಉಳಿಸಿ ಅಭಿಯಾನ ನಡೆಸುತ್ತಿದೆ. ಇದರ ಭಾಗವಾಗಿ ಜಿಲ್ಲಾದ್ಯಂತ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿನ ಕುಂದುಕೊರತೆಗಳನ್ನು ಪಟ್ಟಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ತಲುಪಿಸಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದೆ. ಇನ್ನು ಜಿಲ್ಲೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು. ಟೇಬಲ್‌ಗಳ ಮೇಲೆ ಪದನಾಮ ಫಲಕ ಹಾಕಬೇಕೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಮ್ಮ ಕೆಆರ್‌ಎಸ್ ಪಕ್ಷವು ಸಲ್ಲಿಸಿದ ಮನವಿಗೆ ಡಿಸಿ ಸ್ಪಂದಿಸಿ ಈ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಜಿಲ್ಲಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕಗಳ ಸಮಸ್ಯೆ ಬಗ್ಗೆಯೂ ಜಿಲ್ಲಾ ಪಂಚಾಯಿತಿ ಸಿಇಒ ಅವರ ಗಮನ ಸೆಳೆಯಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ್, ತಾಲೂಕು ಅಧ್ಯಕ್ಷ ರವೀಂದ್ರ ಕೊತ್ತತ್ತಿ, ಉಪಾಧ್ಯಕ್ಷ ಎಸ್.ಜಗದೀಶ್, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net