ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ

29blrp2
Published on

ಬೇಲೂರು: ರಾಜ್ಯದಲ್ಲಿ ದಿನನಿತ್ಯ ಪ್ರಾಣಿಗಳ ಹತ್ಯೆ ನಡೆಯುತ್ತಿದ್ದರೂ ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿ ಕೆಆರ್‌ಎಸ್ ಪಕ್ಷದಿಂದ ಮಂಗಳವಾರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.


ಪಕ್ಷದ ತಾಲೂಕು ಅಧ್ಯಕ್ಷ ಆದೇಶ್ ಮಾತನಾಡಿ, ತಾಲೂಕಿನ ಅರೇಹಳ್ಳಿ ಹೋಬಳಿಯ ಗೊರ್ಗಿಹಳ್ಳಿಯಲ್ಲಿ 2022ರಲ್ಲಿ ಆನೆಯೊಂದನ್ನು ವ್ಯಕ್ತಿಯೊಬ್ಬ ಕೋವಿಯಿಂದ ಗುಂಡು ಹಾರಿಸಿ ಕೊಂದಿದ್ದರು. ಅಂದು ಅರಣ್ಯ ಇಲಾಖೆಯಿಂದ ಎಫ್‌ಐಆರ್ ದಾಖಲಿಸಿದ್ದು ಬಿಟ್ಟರೆ ಇಲ್ಲಿಯವರೆಗೂ ಚಾರ್ಜ್‌ಶೀಟ್ ಹಾಕಿಲ್ಲ. ಇದು ಅರಣ್ಯ ಹಾಗೂ ಪೊಲೀಸ್ ಇಲಾಖೆಯ ದೊಡ್ಡ ವೈಫಲ್ಯವಾಗಿದೆ ಎಂದು ದೂರಿದರು.


ಈ ಬಗ್ಗೆ ಪ್ರಶ್ನಿಸಿದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ. ಮಲೆನಾಡು ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಿದೆ. ಆನೆ ಸಾವಿಗೆ ಕಾರಣರಾದವರ ಮೇಲೆ ಚಾರ್ಜ್‌ರ್ಶೀಟ್ ಹಾಕಿ ಶಿಕ್ಷೆ ನೀಡಬೇಕು. ಪ್ರಕರಣ ನಿರ್ಲಕ್ಷೃ ಮಾಡಿರುವ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು,


ಪಕ್ಷದ ಜಿಲ್ಲಾ ಕಾರ್ಯದರ್ಶಿ ಹರ್ಷ, ತಾಲೂಕು ಉಪಾಧ್ಯಕ್ಷ ಸುನೀಲ್, ಯುವ ಘಟಕದ ಅಧ್ಯಕ್ಷ ಅನಿಲ್, ಜಾವಗಲ್ ಹೋಬಳಿ ಅಧ್ಯಕ್ಷ ಸುರೇಶ್, ಹಳೇಬೀಡು ಹೋಬಳಿ ಅಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ರಿಯಾಜ್ ಅಹಮದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net