15, 16ರಂದು ಸಾವಯವ ಕೃಷಿಮೇಳ

12CBP4
Published on

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ೆ.15, 16 ರಂದು ನಡೆಯಲಿರುವ ಸಾವಯವ ಮತ್ತು ಸಿರಿಧಾನ್ಯಗಳ ಮೇಳ ಹಾಗೂ ಲಪುಷ್ಪ ಪ್ರದರ್ಶನದ ಕುರಿತು ಜನರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತ, ಜಿಪಂ, ಕೃಷಿ ಇಲಾಖೆ, ವಿವಿಧ ಇಲಾಖೆ ಹಾಗೂ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘದ ಒಕ್ಕೂಟ ಬುಧವಾರ ಹಮ್ಮಿಕೊಂಡಿದ್ದ ಜಾಥಾಗೆ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನಗರದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಮೇಳ ಮತ್ತು ಪ್ರದರ್ಶನದಲ್ಲಿ ಸಾವಯವ ಕೃಷಿ ಮತ್ತು ಸಿರಿಧಾನ್ಯ ಉತ್ಪನ್ನಗಳಿಗೆ ಆದ್ಯತೆ ನೀಡುವ ಕುರಿತು ತಿಳಿವಳಿಕೆ ಮೂಡಿಸಲಾಗುತ್ತಿದೆ ಎಂದರು.

ಮಾಹಿತಿಗಾಗಿ ದೂರದ ಮಹಾನಗರಗಳಿಗೆ ಅಲೆಯುವುದನ್ನು ತಪ್ಪಿಸುವುದು ಹಾಗೂ ಜಿಲ್ಲೆಯಲ್ಲಿಯೇ ಸ್ಥಳೀಯ ಉತ್ಪನ್ನಗಳ ಬಗ್ಗೆ ತಿಳಿಸುವ ಮತ್ತು ರೈತರಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆ ಮಳೆ ಮತ್ತು ಅಂತರ್ಜಲವನ್ನೇ ಅವಲಂಬಿಸಿದೆ, ಯಾವುದೇ ಶಾಶ್ವತ ನೀರಾವರಿ ಸೌಲಭ್ಯಗಳಿಲ್ಲ, ಆದರೂ ಇಲ್ಲಿನ ರೈತರು ಹೂವು, ಹಣ್ಣು, ತರಕಾರಿ, ಹಾಲು ಮತ್ತು ರೇಷ್ಮೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಮೆಚ್ಚುಗೆ ವ್ಯಕ್ತಪಡಿಸಿದರು. ಕಡಿಮೆ ಪ್ರಮಾಣದಲ್ಲಿ ನೀರನ್ನು ಬೇಡುವ ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ, ರೈತರು ಸಿರಿಧಾನ್ಯಕ್ಕೆ ಆದ್ಯತೆ ನೀಡುವ ಮೂಲಕ ಲಾಭ ಪಡೆಯಬಹುದು ಎಂದರು.

ಸಿರಿಧಾನ್ಯಗಳನ್ನು ಬೆಳೆಯಲು ಪ್ರೋತ್ಸಾಹ, ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮತ್ತು ಸೇವನೆಯ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಳಿಗೆಗಳನ್ನು ಸ್ಥಾಪಿಸಿ ಮಾಹಿತಿ ನೀಡಲಾಗುವುದು ಎಂದು ಜಿಪಂ ಸಿಇಒ ಬಿ.ೌಜೀಯಾ ತರನ್ನುಮ್ ವಿವರಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಎಲ್.ರೂಪಾ, ಉಪನಿರ್ದೇಶಕಿ ಅನುರೂಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಮಧುರನಾಥರೆಡ್ಡಿ ಇತರರಿದ್ದರು.

ಲಾಂಭನ ಬಿಡುಗಡೆ, ಜಾಥಾ : ಸಿರಿಧಾನ್ಯಗಳ ಹಬ್ಬ ಮತ್ತು ಲಪುಷ್ಪ ಪ್ರದರ್ಶನದ ಲಾಂಛನ ಬಿಡುಗಡೆಗೊಳಿಸಲಾಯಿತು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಮುಖಂಡರು ಭಿತ್ತಿಲಕ ಹಿಡಿದುಕೊಂಡು ನಗರದ ಎಂ.ಜಿ.ರಸ್ತೆ, ಬಿ.ಬಿ.ರಸ್ತೆ ಸೇರಿ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net