ನಾಳೆಯಿಂದ ವಿ.ಸಿ.ಫಾರ್ಮ್‌ನಲ್ಲಿ ಕೃಷಿ ಮೇಳ: ಸಂಶೋಧನಾ ನಿರ್ದೇಶಕ ಡಾ.ಎನ್.ಶಿವಕುಮಾರ್ ಮಾಹಿತಿ

30_11_Mdy_03(Krushi Mela)
Published on

ಮಂಡ್ಯ: ತಾಲೂಕಿನ ವಿ.ಸಿ. ಾರ್ಮ್‌ನ ಆವರಣದಲ್ಲಿ ಡಿ.2 ಮತ್ತು 3ರಂದು ಕೃಷಿ ಮೇಳ ಆಯೋಜಿಸಲಾಗಿದೆ.

ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ, ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆಯ ಸಹಯೋಗದಲ್ಲಿ ಸುಧಾರಿತ ತಳಿಗಳ ಪ್ರದರ್ಶನ, ತಾಂತ್ರಿಕತೆ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ವಲಯ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ.ಎನ್.ಶಿವಕುವಾರ್ ತಿಳಿಸಿದರು.

2ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕೃಷಿ ಮೇಳ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಕೃಷಿ ವಸ್ತು ಪ್ರದರ್ಶನವನ್ನು ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಪ್ರಾತ್ಯಕ್ಷಿಕಾ ತಾಕುಗಳನ್ನು ಉದ್ಘಾಟಿಸಲಿದ್ದಾರೆ. ಮೇಲುಕೋಟೆ ಶಾಸಕ ಸಿ.ಎಸ್. ಪುಟ್ಟರಾಜು ಅಧ್ಯಕ್ಷತೆ ವಹಿಸಲಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೇಳದ ಆಕರ್ಷಣೆಗಳು: ಈ ಬಾರಿಯ ಕಷಿ ಮೇಳದ ಆಕರ್ಷಣೆಗಳೆಂದರೆ ಭತ್ತದ ಸುಧಾರಿತ ತಳಿಗಳ ಹಾಗೂ ಹೈಬ್ರಿಡ್‌ಗಳ ಪ್ರಾತ್ಯಕ್ಷಿಕೆ, ಶ್ರೀ ಪದ್ಧತಿ ಹಾಗೂ ಏರೋಬಿಕ್ ಭತ್ತದ ಬೇಸಾಯ ಪ್ರಾತ್ಯಕ್ಷಿಕೆ, ಡ್ರಂಸೀಡರ್‌ನಿಂದ ಹಾಗೂ ಯಂತ್ರಚಾಲಿತ ನಾಟಿ ಪ್ರಾತ್ಯಕ್ಷಿಕೆ, ಭತ್ತದಲ್ಲಿ ನೇರ ಬಿತ್ತನೆ ಪ್ರಾತ್ಯಕ್ಷಿಕೆ, ಬೀಜೋತ್ಪಾದನಾ ತಾಕುಗಳು, ನೂತನ ರಾಗಿ ತಳಿಗಳ ಪ್ರಾತ್ಯಕ್ಷಿಕೆ, ವಿವಿಧ ಸುಧಾರಿತ ಸಿರಿಧಾನ್ಯ ತಳಿಗಳು. ಮುಸುಕಿನ ಜೋಳ ಮತ್ತು ಶಕ್ತಿವಾನ್ ಜೋಳದ ನೂತನ ಹೈಬ್ರಿಡ್ ತಳಿಗಳ ಪ್ರಾತ್ಯಕ್ಷಿಕೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳು. ವಾಣಿಜ್ಯ ಬೆಳೆಗಳಾದ ಸುಧಾರಿತ ಕಬ್ಬಿನ ತಳಿಗಳು, ಅಂಗಾಂಶ ಕಷಿ ತಂತ್ರಜ್ಞಾನದಲ್ಲಿ ರೋಗಮುಕ್ತ ಕಬ್ಬಿನ ಸಸಿಗಳ ಉತ್ಪಾದನೆ, ಕಬ್ಬಿನಲ್ಲಿ ಆಧುನಿಕ ಬೇಸಾಯ ತಾಂತ್ರಿಕತೆಗಳು, ರಾಸಾಯನಿಕ ಮುಕ್ತ ಬೆಲ್ಲ ತಯಾರಿಕೆಯ ಪ್ರಾತ್ಯಕ್ಷಿಕೆ, ಕಬ್ಬು ನಾಟಿ ವಾಡುವ ಹಾಗೂ ತರಗು ಪುಡಿ ವಾಡುವ ಯಂತ್ರಗಳ ಪ್ರಾತ್ಯಕ್ಷಿಕೆ ಹಾಗೂ ವಿವಿಧ ಹತ್ತಿ ತಳಿಗಳ ಪ್ರಾತ್ಯಕ್ಷಿಕೆ ಇರಲಿದೆ ಎಂದು ವಿವರಿಸಿದರು.

ಇದಲ್ಲದೆ ಮೇವಿನ ಬೆಳೆಗಳ ಸುಧಾರಿತ ತಳಿಗಳು, ರಸಮೇವು, ಜಲ ಕೃಷಿಯಲ್ಲಿ ಮೇವು ಉತ್ಪಾದನೆ, ದ್ವಿದಳ ಧಾನ್ಯ ಮತ್ತು ಎಣ್ಣೆ ಕಾಳು ಬೇಳೆಗಳು, ನೀರು ನಿರ್ವಹಣಾ ತಂತ್ರಜ್ಞಾನ, ದೂರ ಸಂವೇದಿ ನೀರಾವರಿ ಪದ್ಧತಿ, ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ, ಕೃಷಿ ವಸ್ತು ಪ್ರದರ್ಶನ, ಸಮಗ್ರ ಮೀನುಸಾಕಾಣಿಕೆ, ವಿವಿಧ ಸೊಪ್ಪು, ತರಕಾರಿ, ಹೂವಿನ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ವ್ಯವಸ್ಥೆ ವಾಡಲಾಗಿದೆ ಎಂದರು.

ಡೀನ್(ಕೃಷಿ) ಡಾ.ಎಸ್.ಎಸ್.ಪ್ರಕಾಶ್, ವಿಸ್ತೀರ್ಣ ವಿಭಾಗದ ಮುಖ್ಯಸ್ಥ ಡಾ.ರಂಗನಾಥ್, ಸಹ ವಿಸ್ತಾರಣಾ ನಿರ್ದೇಶಕ ಡಾ.ಡಿ.ರುಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net