‘ಧ್ವನಿ’ ಅಂತರಾಳ ಭಾವನೆಯ ಪ್ರತಿಕ್ರಿಯೆ: ರಾಜಾರಾಮ ರಾವ್ ಟಿ.ಮೀಯಪದವು ಅಭಿಮತ

New Project (20)
Published on

ಮಂಜೇಶ್ವರ: ಅನುಭವಗಳ ಬುತ್ತಿಯಿಂದ ಹೊರಚೆಲ್ಲಿದ ಅನುಭಾವ ಕೃತಿ ‘ಧ್ವನಿ’ ಅಂತರಾಳದ ಭಾವನೆಯ ಪ್ರತಿಕ್ರಿಯೆಯಾಗಿ ಪ್ರಕಟಗೊಂಡಿದ್ದು, ಶೀರ್ಷಿಕೆ ವಸ್ತುನಿಷ್ಠವಾಗಿ ಧ್ವನಿಸಿದೆ ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಜಾರಾಮ ರಾವ್ ಟಿ.ಮೀಯಪದವು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಹಾಗೂ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜು ಕನ್ನಡ ವಿಭಾಗ ಆಶ್ರಯದಲ್ಲಿ ಶನಿವಾರ ಕಾಲೇಜು ಕನ್ನಡ ವಿಭಾಗ ಸಭಾಂಗಣದಲ್ಲಿ ನಾಡೋಜ ಡಾ.ಕಯ್ಯರ ಕಿಞ್ಞಣ್ಣ ರೈ ಸಂಸ್ಮರಣೆ ಸಮಾರಂಭದಲ್ಲಿ ಕಾಸರಗೋಡು ಸರ್ಕಾರಿ ಕಾಲೇಜು ಪದವಿ ವಿದ್ಯಾರ್ಥಿನಿ ದೀಕ್ಷಿತಾ ಮೀಯಪದವು ಅವರ ಸ್ವರಚಿತ ಲಘು ಬರಹಗಳ ಸಂಕಲನ ‘ಧ್ವನಿ’ ಕೃತಿ ಪರಿಚಯದಲ್ಲಿ ಹೇಳಿದರು.

ಕಸಾಪ ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಕೃತಿ ಬಿಡುಗಡೆಗೊಳಿಸಿ, ಇನ್ನಷ್ಟು ಕೃತಿಗಳು ಮೂಡಿಬರಲಿ ಎಂದು ಹಾರೈಸಿದರು.

ಕಾಸರಗೋಡು ಸರ್ಕಾರಿ ಕಾಲೇಜು ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ಶ್ರೀಧರ ಎನ್., ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜು ಪ್ರಾಂಶುಪಾಲ ಡಾ.ಮೊಹಮ್ಮದಲಿ ಕೆ.ಪೆರ್ಲ, ಕಾಲೇಜು ಕಚೇರಿ ಅಧೀಕ್ಷಕ ದಿನೇಶ ಕೆ. ಶುಭಾಶಂಸನೆಗೈದರು. ಲೇಖಕಿ ದೀಕ್ಷಿತಾ ಉಪಸ್ಥಿತರಿದ್ದರು. ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಪ್ರೊ.ಶಿವಶಂಕರ ಪಿ.ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಾಪ ಕೇರಳ ಗಡಿನಾಡ ಘಟಕ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ಸುಜೇಶ್ ಎಸ್. ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಜಯಂತಿ ಕೆ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net