ಅವೈಜ್ಞಾನಿಕ ಕಾಮಗಾರಿ ವಿರುದ್ಧ ಮುಂದುವರೆದ ಕರವೇ ಪ್ರತಿಭಟನೆ

Tulasi-1
Published on

ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಅವೈಜ್ಞಾನಿಕವಾಗಿದೆ. ಅಂತೆಯೇ ಸಾಕಷ್ಟು ಅವ್ಯವಹಾರ ನಡೆದಿದ್ದು, ಕೂಡಲೇ ಇದಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷೃಣಾ ವೇದಿಕೆ ಕಾರ್ಯಕರ್ತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶನಿವಾರ ಮತ್ತು ಭಾನುವಾರ ತಾಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಪ್ರತಿಭಟನೆ ನಡೆಸಿದ್ದರು. ವೇದಿಕೆ ಜಿಲ್ಲಾಧ್ಯಕ್ಷೃ ಎಚ್.ಡಿ.ಜಯರಾಂ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ನಡೆಯುತ್ತಿದೆ. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಉಮ್ಮಡಹಳ್ಳಿ ಗೇಟ್ ಬಳಿ ಸರ್ವಿಸ್ ರಸ್ತೆ ನಿರ್ಮಿಸಬೇಕು. ಗುಣಮಟ್ಟದ ಕಾಮಗಾರಿಯಲ್ಲಿ ಟೋಲ್ ರಸ್ತೆ ಹಾಗೂ ಸರ್ವಿಸ್ ರಸ್ತೆ ನಿರ್ಮಿಸಬೇಕು. ಬೆಂಗಳೂರು-ಮೈಸೂರು ರಸ್ತೆಯುದ್ದಕ್ಕು ಬರುವ ಗ್ರಾಮಗಳ ಜನರಿಗೆ ಈ ರಸ್ತೆ ಬಳಕೆಗೆ ಯಾವುದೆ ಟೋಲ್ ವಿಧಿಸಬಾರದು ಎಂದು ಆಗ್ರಹಿಸಿದರು.
ಹೆದ್ದಾರಿ ನಿರ್ವಾಣದ ಹೆಸರಿನಲ್ಲಿ ಇದೊಂದು ಸಾವಿರಾರು ಕೋಟಿ ರೂ ಹಗರಣವಾಗಿದೆ. ಇಡೀ ಯೋಜನೆಯ ಪ್ರಕ್ರಿಯೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಯೋಜನೆಯ ಮೂಲನಕ್ಷೆ ಹಾಗೂ ಯೋಜನೆಯ ವಿವರಗಳ ಕಾಮಗಾರಿಗಳ ವಿವರವಾದ ನಾಮಫಲಕವನ್ನು ಕಾಮಗಾರಿ ಸ್ಥಳಗಳಲ್ಲಿ ನಿಯವಾನುಸಾರ ಪ್ರಕಟಿಸಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಡಿಬಿಎಲ್ ಕಂಪನಿಯ ಜತೆಗಿನ ಒಪ್ಪಂದ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net