ಮೈಸೂರು ಚಲೋಗೆ ಕೆ.ಎಸ್.ಈಶ್ವರಪ್ಪ ಆಕ್ಷೇಪ

ex minister k.s.eshwarappa
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಪಕ್ಷದಿಂದ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಡಾದಲ್ಲಿ ಅಕ್ರಮವಾಗಿ ಸೈಟು ಪಡೆಯಲಾಗಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ ಕೈಗೊಂಡಿದ್ದಾರೆ. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ಹಗರಣಗಳ ಬಗ್ಗೆ ಪ್ರತಿಭಟಿಸುತ್ತಿದ್ದಾರೆ. ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪ ಮಾಡಿಕೊಂಡು ಬೀದಿ ನಾಟಕ ಮಾಡುತ್ತಿದ್ದಾರೆ. ಇದು ಮೂಢರ ಬೀದಿ ಜಗಳವಾಗಿದೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಮೈಸೂರು ಚಲೋ ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ನಡೆಸುತ್ತಿದೆ. ಮೂರೂ ಪಕ್ಷದ ನಾಯಕರು ಏಕವಚನದಲ್ಲಿ ನಿಂದಿಸಿಕೊಳ್ಳುತ್ತಿದ್ದಾರೆ. ರಾಜ್ಯದ ಜನರು ಅವರ ಹೇಳಿಕೆ ಕೇಳಿ ಬೇಸರಗೊಂಡಿದ್ದಾರೆ. ಮುಡಾ ಸೇರಿ ಎಲ್ಲ ಪ್ರಕರಣಗಳನ್ನೂ ಸಿಬಿಐ ತನಿಖೆಗೆ ವಹಿಸಬೇಕು. ತಕ್ಷಣ ಮೈಸೂರು ಚಲೋ ಪಾದಯಾತ್ರೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net