ಸರಳವಾಗಿ ಜನ್ಮದಿನ ಆಚರಿಸಿಕೊಂಡ ವಿಜಯಾನಂದ: ಕೆವಿಎಸ್ ಕುಟುಂಬದ ಕುಡಿಗೆ ಭರಪೂರ ಅಭಿನಂದನೆ

KS Vijayananda Birthday Celebration Mandya
Published on

ಮಂಡ್ಯ: ನಿತ್ಯಸಚಿವ ಕೆ.ವಿ.ಶಂಕರಗೌಡ ಅವರ ಮೊಮ್ಮಗ, ಜೆಡಿಎಸ್ ಯುವನಾಯಕ, ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಸರಳವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು.

ಸ್ವಗ್ರಾಮ ಕೀಲಾರದಲ್ಲಿ ಕೆ.ವಿ.ಶಂಕರಗೌಡ ಮತ್ತು ತಂದೆ ಕೆ.ಎಸ್.ಸಚ್ಚಿದಾನಂದ ಅವರ ಸಮಾಧಿಗೆ ಪೂಜೆ ಸಲ್ಲಿಸದರು. ಬಳಿಕ ಅಭಿಮಾನಿಗಳಿಂದ ಶುಭಾಷಯ ಸ್ವೀಕರಿಸಿದರು. ಅಂತೆಯೇ ನಗರದ ಬಂದೀಗೌಡ ಬಡಾವಣೆಯಲ್ಲಿರುವ ಅವರ ನಿವಾಸದ ಎದುರು ಅಭಿಮಾನಿಗಳು ಹಾಗೂ ಜೆಡಿಎಸ್ ಮುಖಂಡರೊಂದಿಗೆ ಕೇಕ್ ಕತ್ತರಿಸಿದರು. ಈ ಸಂದರ್ಭ ಅವರ ಅಭಿಮಾನಿಗಳು ಭಾರಿ ಗಾತ್ರದ ಹೂವಿನ ಹಾರಗಳನ್ನು ಹಾಕುವ ಮೂಲಕ ಅಭಿಮಾನ ಮೆರೆದರು.

ಅತ್ತ ವಿಜಯಾನಂದ ಅಭಿಮಾನಿಗಳು ನಗರದ ಪುರಾಣ ಪ್ರಸಿದ್ಧ ಅರ್ಕೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಂಜೆವರೆಗೂ ಹಿತೈಷಿಗಳು, ಪಿಇಟಿ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜು, ಪದವಿಪೂರ್ವ ಕಾಲೇಜು, ಪದವಿ ಕಾಲೇಜು ಹಾಗೂ ಬಿ.ಇಡಿ ಕಾಲೇಜಿನ ಶಿಕ್ಷಕರು ಹಾಗೂ ಸಿಬ್ಬಂದಿ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿ ಕೆ.ವಿ.ಶಂಕರಗೌಡ ಕುಟುಂಬದ ಕುಡಿಗೆ ಹೂಗುಚ್ಛ ನೀಡಿ ಭವಿಷ್ಯಕ್ಕೆ ಶುಭ ಹಾರೈಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net