ಧರ್ಮಸ್ಥಳದಲ್ಲಿ ಕೆಸರ್ಡ್‌ ಒಂಜಿ ದಿನ

Bel_Kesard-onji-dina
Published on

ಬೆಳ್ತಂಗಡಿ: ಮೂಡಂಗಲ್ ಫ್ರೆಂಡ್ಸ್ ಬಳಗದ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಕೆಸರ್ಡ್‌ ಒಂಜಿ ದಿನ ಕಾರ್ಯಕ್ರಮ ನಡೆಯಿತು.

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸಂಘಟಿತರಾಗಿ ಆಯೋಜಿಸುವ ಇಂತಹ ಕಾರ್ಯಕ್ರಮಗಳಿಂದ ಪರಸ್ಪರ ಪ್ರೀತಿ-ವಿಶ್ವಾಸ, ಆತ್ಮೀಯತೆ ಹೆಚ್ಚಾಗಿ ಸಾಮಾಜಿಕ ಸಾಮರಸ್ಯ ಮೂಡಿಬರುತ್ತದೆ. ಈ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವರ್ಧನೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದರು.

ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು. ದೇವಸ್ಥಾನದ ಪಾರುಪತ್ಯಗಾರ ಲಕ್ಷ್ಮೀನಾರಾಯಣ್ ರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಮಲಾ, ವಕೀಲ ಕೇಶವ ಬೆಳಾಲ್, ಧನಕೀರ್ತಿ ಆರಿಗ, ಮುರಳಿಧರ ದಾಸ್, ಹಷರ್ ಜೈನ್ ಮತ್ತು ಗದ್ದೆಯ ಮಾಲೀಕ ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದರು.

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net