ಮಹಾರಾಷ್ಟ್ರದ ರೀತಿಯಲ್ಲೇ ಕರ್ನಾಟದಲ್ಲೂ ಕ್ಷಿಪ್ರ ರಾಜಕೀಯ ಬೆಳವಣಿಗೆ: ಕೆ.ಎಸ್​. ಈಶ್ವರಪ್ಪ

KS Eshwarappa
Published on

ದಾವಣಗೆರೆ: ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಸರ್ಕಾರ ಮುಂದಿನ ಮೂರು ತಿಂಗಳೊಳಗೆ ಪತನವಾಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ದಾವಣೆಗೆರೆಯಲ್ಲಿ ಈ ಕುರಿತು ಮಾತನಾಡಿದ ಈಶ್ವರಪ್ಪ ಮಹಾರಾಷ್ಟ್ರದ ರೀತಿಯಲ್ಲೇ ಕರ್ನಾಟದಲ್ಲಿಯೂ ಸಹ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

ಕಾದು ನೋಡಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ತುಂಬಾ ದಿನಗಳು ಇರುವುದಿಲ್ಲ. ಅದರ ಆಯಸ್ಸು ಮೂರು ತಿಂಗಳು ಮಾತ್ರ. ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ ಕಾದು ನೋಡಿ. ಅಜಿತ್​ ಪವಾರ್​ ಅವರು ಎನ್​ಸಿಪಿಯಲ್ಲಿದ್ದುಕೊಂಡು ಬಿಜೆಪಿಗೆ ಬೆಂಬಲ ಸೂಚಿಸಿದ ಹಾಗೆ ರಾಜ್ಯ ಕಾಂಗ್ರೆಸ್​​ನ ಕೆಲ ಶಾಸಕರು ಹೊರ ಬರಲಿದ್ದಾರೆ.

ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಕಾಂಗ್ರೆಸ್​ ಶಾಸಕರು ದಿನ ದೂಡುತ್ತಿದ್ದಾರೆ. ಮಹಾರಾಷ್ಟ್ರದ ರೀತಿಯಲ್ಲಿಯೇ ಕರ್ನಾಟಕದಲ್ಲಿಯೂ ಕ್ಷ್ರಿಪ ರಾಜಕೀಯ ಬೆಳವಣೀಗೆಗಳು ನಡಯಲಿವೆ.

ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲಿ ವಿಳಂಬ ಕುರಿತು ಪ್ರತಿಕ್ರಿಯಿಸಿ ಶೀಘ್ರದಲ್ಲೇ ನೇಮಕ ಮಾಡಲಾಗುತ್ತದೆ. ಮುಂಬರು ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಪಕ್ಷ ನಾಯಕ ಹಾಗೂ ರಾಜ್ಯ ಘಟಕದ ಅಧ್ಯಕ್ಷರನ್ನು ನೇಮಿಸಲಾಗುವುದು. ಅತ್ಯಂತ ಸಮರ್ಥರನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net