ಫೆ.22 ಮತ್ತು 23ರಂದು ಪಾಲೆಮಾರ್ ಗಾರ್ಡನ್‌ನಲ್ಲಿ ‘ಕ್ಷಾತ್ರ ಸಂಗಮ-3’

mng-19feb-krishna j palemar
Published on



ಮಂಗಳೂರು : ರಾಮಕ್ಷತ್ರಿಯ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಫೆ.22 ಮತ್ತು 23ರಂದು ‘ಕ್ಷಾತ್ರ ಸಂಗಮ-3’ ರಾಮಕ್ಷತ್ರಿಯರ ಸಮಾವೇಶ ನಗರದ ಮೋರ್ಗನ್ಸ್ ಗೇಟ್‌ನ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆಯಲಿದೆ.
ರಾಮಕ್ಷತ್ರಿಯ ಸಮಾಜದ ಯುವ ಜನತೆಗೆ ನಮ್ಮ ಸಮಾಜದ ಸಂಸ್ಕೃತಿ, ಆಚಾರ, ವಿಚಾರ, ಪರಂಪರೆಯನ್ನು ತಿಳಿಯಪಡಿಸುವುದೆಂದು ಸಮಾವೇಶದ ಮುಖ್ಯ ಉದ್ದೇಶ ಎಂದು ಸಮ್ಮೇಳನ ಸಮಿತಿಯ ಪ್ರಧಾನ ಸಂಚಾಲಕ ಜೆ.ಕೆ.ರಾವ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮಾವೇಶದಲ್ಲಿ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ
ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಮಕ್ಷತ್ರಿಯ ಸಮಾಜದ 52 ಸಂಘಗಳ ಪ್ರತಿನಿಧಿಗಳನ್ನು ಈ ಸಮಾವೇಶಕ್ಕೆ ಆಹ್ವಾನಿಸಲಾಗಿದೆ.
ಫೆ. 22 ರಂದು ಬೆಳಗ್ಗೆ 9ಕ್ಕೆ ರಾಮತಾರಕ ಯಜ್ಞ ಮತ್ತು ಜಪ , ವಧುವರ ಅನ್ವೇಷಣೆ , 11ಕ್ಕೆ ಉದ್ದಿಮೆದಾರರ ಸಮಾವೇಶ , ಮಧ್ಯಾಹ್ನದ ಬಳಿಕ ಹನುಮಾನ್ ಚಾಲೀಸ ಕಂಠಪಾಠ ಸ್ಪರ್ಧೆ, ಪುಷ್ಪ ಜೋಡಣೆ, ರಂಗವಲ್ಲಿ ಸ್ಪರ್ಧೆಗಳು ನಡೆಯಲಿದೆ ಎಂದು ಅವರು ತಿಳಿಸಿದರು.
ಸಾಯಂಕಾಲ 4ಕ್ಕೆ ಸಮಾವೇಶವನ್ನು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಉದ್ಘಾಟಿಸಲಿದ್ದಾರೆ. ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಸೂಚಿ
ಭಾಷಣ ಮಾಡಲಿದ್ದಾರೆ. 6ಕ್ಕೆ ರಾಮಕ್ಷತ್ರಿಯ ಸೇವಾ ಸಂಘದ ಮಹಿಳಾ ಮತ್ತು ಯುವ ವೃಂದದ ಸದಸ್ಯರಿಂದ ’ಕರ್ನಾಟಕ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
ಫೆ.23 ರಂದು ರಾಮಕ್ಷತ್ರಿಯ ಸಮಾಜದ ವಿವಿಧ ಸಂಘಗಳ ಸದಸ್ಯರಿಗೆ ಪ್ರತಿಭಾ ಸ್ಪರ್ಧೆ ನಡೆಯಲಿದೆ. ರಾಮಕ್ಷತ್ರಿಯರ ಪಾರಂಪರಿಕ ಸಸ್ಯಹಾರಿ ಆಹಾರೋತ್ಸವ ಪ್ರದರ್ಶನ ಹಾಗೂ ಸ್ಪರ್ಧೆ ಏರ್ಪಡಿಸಲಾಗಿದೆ. ಮಧ್ಯಾಹ್ನ 2ಕ್ಕೆ ಯುವ ಮತ್ತು ಮಹಿಳಾ ಸಮ್ಮೇಳನ, 3ಕ್ಕೆ
ವಿಚಾರ ಗೋಷ್ಠಿ ನಡೆಯಲಿದೆ. ಸಾಯಂಕಾಲ 5ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ
ಮೈಸೂರು ಮಹಾರಾಜ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಲಿದ್ದಾರೆ. ದ.ಕ.ಸಂಸದ
ಕ್ಯಾ.ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಮುರಳೀಧರ .ಸಿ.ಎಚ್.ತಿಳಿಸಿದರು.
ಮಾಜಿ ಸಚಿವ ಕೃಷ್ಣ.ಜೆ.ಪಾಲೆಮಾರ್, ಸಂಘದ ಗೌರವಾಧ್ಯಕ್ಷ ರವೀಂದ್ರ.ಕೆ., ಉಪಾಧ್ಯಕ್ಷ ಜಯಕರ.ಕೆ., ಕಾರ್ಯದರ್ಶಿ ರವೀಂದ್ರ ರಾವ್ ,ಕೋಶಾಧಿಕಾರಿ ದಿನೇಶ್ ಕುಮಾರ್ ಬೇಕಲ್ ಉಪಸ್ಥಿತರಿದ್ದರು.

*2014 ಮತ್ತು 2016 ರಲ್ಲಿ ಕ್ಷಾತ್ರ ಸಂಗಮ ಸಮಾವೇಶ ನಡೆದಿತ್ತು .ಇದು ಮೂರನೇ ಕಾರ್ಯಕ್ರಮವಾಗಿದೆ. ರಾಮಕ್ಷತ್ರಿಯ ಸಮಾಜ ಬಾಂಧವರನ್ನು ಒಗ್ಗೂಡಿಸುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ. ಸಮಾವೇಶದಲ್ಲಿ ರಾಮಕ್ಷತ್ರಿಯ ಸಮಾಜದ ಅತೀ ಹಿರಿಯ ವ್ಯಕ್ತಿಗಳನ್ನು ಮತ್ತು ಗಣ್ಯರನ್ನು ಸನ್ಮಾನಿಸಲಾಗುವುದು.
-ಕೃಷ್ಣ.ಜೆ.ಪಾಲೆಮಾರ್, ಮಾಜಿ ಸಚಿವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net