ಪ್ರಧಾನಿ ನರೇಂದ್ರಮೋದಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ: ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ನೇತೃತ್ವದಲ್ಲಿ ವಿಶೇಷ ಪೂಜೆ

Narendra Modi birthday
Published on

ಮಂಡ್ಯ: ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಜನ್ಮದಿನದ ಅಂಗವಾಗಿ ನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ನೇತೃತ್ವದಲ್ಲಿ ಶಕ್ತಿದೇವತೆ ಕಾಳಿಕಾಂಭ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಡೆ ಹೊಡೆಸಲಾಯಿತು. ಬಳಿಕ ಜಯಚಾಮರಾಜೇಂದ್ರ ವೃತ್ತದಲ್ಲಿ ಮೋದಿ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಲಾಯಿತು.

ಈ ವೇಳೆ ಉಮೇಶ್ ಮಾತನಾಡಿ, ಬಡವರು ಮತ್ತು ದಲಿತರು, ಶೋಷತರಿಗೆ ವಿಶೇಷ ಕೊಡುಗೆಗಳನ್ನು ನೀಡುವುದರ ಜತೆಗೆ ದೇಶದ ಗೌರವವನ್ನು ವಿಶ್ವದೆಲ್ಲೆಡೆ ಪಸರಿಸುವಂತೆ ಮಾಡಿದ ಹೆಮ್ಮೆ ಪ್ರಧಾನಿ ನರೇಂದ್ರಮೋದಿ ಅವರಿಗೆ ಸಲ್ಲುತ್ತದೆ. ವಿಶ್ವಕಂಡ ಶ್ರೇಷ್ಟ ನಾಯಕ ಮೋದಿ ಅವರು ಮಂಡ್ಯಕ್ಕೆ ಭೇಟಿ ನೀಡುವ ಮೂಲಕ ಜಿಲ್ಲೆಯ ಜನರ ಗೌರವವನ್ನು ಎತ್ತಿ ಹಿಡಿದಿದ್ದಾರೆ. 40 ವರ್ಷದ ಅವಧಿಯಲ್ಲಿ ಯಾವ ಪ್ರಧಾನಿಯೂ ಜಿಲ್ಲೆಗೆ ಭೇಟಿ ನೀಡಿಲ್ಲ ಎಂದರು.

2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ನರೇಂದ್ರಮೋದಿ ಅವರು ಈ ದೇಶದ ಚುಕ್ಕಾಣಿ ಹಿಡಿಯುವಂತಾಗಬೇಕು. ಅದಕ್ಕೆ ಮಂಡ್ಯ ಜಿಲ್ಲೆಯ ಜನತೆ ಸಹ ಆಶೀರ್ವಾದ ಮಾಡಿ ಅವರ ಬೆಂಬಲಕ್ಕೆ ನಿಲ್ಲುವಂತಾಗಬೇಕು. ಅವರ ಮೇಲಿರುವ ಎಲ್ಲ ವಕ್ರ ದೃಷ್ಠಿಯೂ ತೊಲಗುವಂತಾಗಲಿ ಎಂದು ಪ್ರಾರ್ಥಿಸಿ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಡೆ ಹೊಡೆಸಿದ್ದೇವೆ ಎಂದು ಹೇಳಿದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ, ಬಿಜೆಪಿ ಮುಖಂಡರಾದ ಎಚ್.ಆರ್.ಅರವಿಂದ್, ಡಾ.ಸದಾನಂದ, ಶಿವಕುಮಾರ್ ಆರಾಧ್ಯ, ಸಿ.ಟಿ.ಮಂಜುನಾಥ್, ವಿವೇಕ್, ಅರುಣ್‌ಕುಮಾರ್, ರಮೇಶ್, ಹೊಸಹಳ್ಳಿ ಶಿವು, ನರಸಿಂಹ, ನವೀನ್, ಅಶೋಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net