ಕಾನೂನು ವಿವಿಯಲ್ಲಿ ಕನ್ನಡ ಅನುಷ್ಠಾನ ಸಭೆ

Published on

ಹುಬ್ಬಳ್ಳಿ: ಇಲ್ಲಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದ ತಂಡವು ಬುಧವಾರ ಕನ್ನಡ ಅನುಷ್ಠಾನ ಪರಿಶೀಲನೆ ಸಭೆ ನಡೆಸಿತು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾಷೆ ಅನುಷ್ಠಾನವು ಸಮರ್ಪಕವಾಗಿದೆ. ಕನ್ನಡ ಭಾಷೆಗೆ ಆದ್ಯತೆ ನೀಡಿ ತನ್ನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಕನ್ನಡವನ್ನು ಬಳಸುತ್ತಿರುವುದು ಪ್ರಶಂಸನೀಯ ಎಂದು ಡಾ. ಪುರುಷೋತ್ತಮ ಹೇಳಿದರು.

ಮುಂದಿನ ದಿನಗಳಲ್ಲಿ ಕನ್ನಡ ಭಾಷೆಗೆ ಇರುವ ತೀವ್ರ ತರಹದ ಸವಾಲುಗಳ ಬಗ್ಗೆ ಚರ್ಚಿಸಿ, ವಿಶ್ವವಿದ್ಯಾಲಯವು ಈಗಿನಿಂದಲೇ ಅಂತಹ ತೊಡಕುಗಳಿಗೆ ಅವಕಾಶ ಕೊಡದೆ ಕನ್ನಡ ಭಾಷೆಗೆ ಮತ್ತು ಸಂಸ್ಕೃತಿಗೆ ಹೃದಯವಂತಿಕೆಯ ಆದ್ಯತೆ ನೀಡಿ, ಬೆಳೆಸಿ ಪೋಷಿಸಲು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಕನ್ನಡದ ವಿಸತ ಬಳಕೆಗೆ ಇರುವ ಅವಕಾಶಗಳ ಬಗ್ಗೆ ವಿವರಿಸಿದರು.

ಕಾನೂನು ವಿಶ್ವವಿದ್ಯಾಲಯ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಭಾಗಿತ್ವದಲ್ಲಿ ಕಾನೂನು ಪುಸ್ತಕ ಅನುವಾದ, ಕನ್ನಡ ಆಧಾರಿತ ಇತರ ಶೈಣಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸೂಚಿಸಿದರು.

ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯೆ ದಾಕ್ಷಾಯಿಣಿ ಹುಡೇದ, ಮುಂದಿನ ದಿನಗಳಲ್ಲಿ ಪ್ರಾಧಿಕಾರವು ಕೈಗೊಳ್ಳುವ ಕನ್ನಡ ಆಧಾರಿತ ಕಾರ್ಯಕ್ರಮಗಳಲ್ಲಿ ವಿಶ್ವವಿದ್ಯಾಲಯವು ಸೂಕ್ತ ರೀತಿಯಲ್ಲಿ ಸಹ ಭಾಗಿತ್ವವನ್ನು ನೀಡಬೇಕೆಂದು ಕೋರಿದರು.

ಧಾರವಾಡ ಕನ್ನಡ ಸಾಹಿತ್ಯ ಪರಿಷತ್ ಅಧ್ಯ ಡಾ. ಲಿಂಗರಾಜ ಅಂಗಡಿ ಮಾತನಾಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಯಶಸ್ವಿ ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯ ಕುಲಸಚಿವೆ ಗೀತಾ ಕೌಲಗಿ, ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆ, ಯುವಜನೋತ್ಸವ ಮತ್ತು ಮಾದರಿ ಅಧಿವೇಶನ ಮುಂತಾದ ಚಟುವಟಿಕೆಗಳನ್ನು ಪರಿಚಯಿಸಿದರು.
ಮೌಲ್ಯಮಾಪನ ಕುಲಸಚಿವೆ ಡಾ. ರತ್ನಾ ಭರಮಗೌಡರ್, ಹಣಕಾಸು ಅಧಿಕಾರಿ ಸಂಜೀವ ಕುಮಾರ ಸಿಂಗ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡದ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಉಪಸ್ಥಿತರಿದ್ದರು.

ಆಡಳಿತ ಅಧಿಕಾರಿ ಡಾ. ರಂಗಸ್ವಾಮಿ ಡಿ. ಸ್ವಾಗತಿಸಿದರು, ಡಾ. ರಾಜೇಂದ್ರಕುಮಾರ ಹಿಟ್ಟಣಗಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net