ಕಾನೂನು ವಿವಿಯಲ್ಲಿ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ

kslu new new
Published on

ಹುಬ್ಬಳ್ಳಿ : ದೇಶದ ಪ್ರಕೃತಿಯ ಸಮತೋಲನ ಕಾಪಾಡುವ ಗುರುತರ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರದ್ದಾಗಿದೆ ಎಂದು ಜನಪದ ಕಲಾವಿದ ಸಾಂಬಯ್ಯ ಹಿರೇಮಠ ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕಾನೂನು ಶಾಲೆಯ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ವಿದ್ಯಾರ್ಥಿಗಳ ಸಂಘ ಜಿಮಖಾನಾ, ಎನ್​ಎಸ್​ಎಸ್, ರೆಡ್ ಕ್ರಾಸ್, ಕಾನೂನು ಸೇವೆಗಳು ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ನುಡಿದಂತೆ ಬರೆಯಲು ಸಾಧ್ಯವಾಗುವ ಭಾಷೆ ಕನ್ನಡ ಮಾತ್ರ ಎಂದು ಅವರು, ಹಡದವ್ವ ಮತ್ತು ನುಡಿದವ್ವನನ್ನು ಕಾಪಾಡಬೇಕು ಎಂಬ ಭಾವನಾತ್ಮಕ ಸಂದೇಶವನ್ನು ತಮ್ಮ ಗೀತೆಯ ಮೂಲಕ ಪ್ರಸ್ತುತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಸಿ. ಬಸವರಾಜು ಮಾತನಾಡಿದರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಸಂತ ಲದ್ವಾ, ಡಾ. ಎಚ್.ವಿ. ಬೆಳಗಲಿ . ಕುಲಸಚಿವೆ ಅನುರಾಧಾ ವಸ್ತ್ರದ, ಡಾ. ಜಿ.ಬಿ. ಪಾಟೀಲ, ಡಾ. ರತ್ನಾ ಭರಮಗೌಡರ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net