ನಿರಾಸೆಯಾದ ಕೆಎಸ್‌ಎನ್ ಅಭಿಮಾನಿಗಳು

KSN Fans Social Media Upset
ಶಾಸಕ ಕೆ.ಶಿವನಗೌಡ ನಾಯಕ ಅಭಿಮಾನಿಗಳು ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಬೇಸರದ ಸಂದೇಶ ಹರಿಬಿಟ್ಟಿರುವುದು.
Published on

ಅರಕೇರಾ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಶಾಸಕ ಕೆ. ಶಿವನಗೌಡ ನಾಯಕಗೆ ಸಚಿವ ಸ್ಥಾನ ನೀಡದಿದ್ದಕ್ಕಾಗಿ ಜಿಲ್ಲೆಯ ಕೆಎಸ್‌ಎನ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ನಾಲ್ಕು ಬಾರಿ ಶಾಸಕ, ಒಮ್ಮೆ ಸಚಿವ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ನಿಗಮ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವಿ ರಾಜಕಾರಣಿಗೆ ಸಚಿವ ಸ್ಥಾನ ನೀಡಬೇಕೆಂಬ ಕೂಗು ಎಲ್ಲೆಡೆ ಕೇಳಿ ಬಂದಿತ್ತು. ಅಭಿಮಾನಿಗಳು ಒಂದುಕಡೆ ಸುದ್ದಿಗೋಷ್ಠಿ ನಡೆಸಿ ಹೈಕಮಾಂಡ್‌ಗೆ ಒತ್ತಡ ಹೇರಿದರೆ, ಇನ್ನೊಂದೆಡೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಆದರೆ ಬುಧವಾರ ಪ್ರಕಟವಾದ ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಶಾಸಕ ಕೆ. ಶಿವನಗೌಡ ನಾಯಕರನ್ನು ಪರಿಗಣಿಸದ ಕಾರಣ ವಾಟ್ಸ್‌ಆ್ಯಪ್, ಫೇಸ್‌ಬುಕ್, ಟ್ವಿಟ್ಟರ್, ಟೆಲಿಗ್ರಾಮ್ ಇತರ ಸಾಮಾಜಿಕ ಜಾಲತಾಣಗಳಲ್ಲಿ ಬೇಸರದ ಸಂದೇಶಗಳು ಹರಿದಾಡಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net