ಬೈಕ್​ಗೆ ಕೆಎಸ್​​ಆರ್​​ಟಿಸಿ ಬಸ್​ ಡಿಕ್ಕಿಯಾಗಿ ಸ್ಥಳದಲ್ಲೇ ಯುವಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

Accident
Published on

ಚಾಮರಾಜನಗರ: ಬೈಕ್​​ ಹಾಗೂ ಕೆಎಸ್​ಆರ್​ಟಿಸಿ ಬಸ್​ ನಡುವೆ ಡಿಕ್ಕಿಯಾಗಿ ಬೈಕ್​​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರಗಾಯಗೊಂಡಿರುವ ಘಟನೆ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

ಮೃತನನ್ನು ಗುಂಡ್ಲುಪೇಟೆ ತಾಲೂಕಿನ ಕಮರಹಳ್ಳಿ ಗ್ರಾಮದ ಕೀರ್ತಿ (20) ಎಂದು ಗುರುತಿಸಲಾಗಿದ್ದು, ಹಿಂಬದಿ ಕುಳಿತಿದ್ದ ಮಾದೇಶ (20) ಗಂಭೀರ ಗಾಯಗೊಂಡಿದ್ದು,ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲೆಮಹದೇಶ್ವರ ಬೆಟ್ಟದಲ್ಲಿ ಮಾದೇಶ್ವರನಿಗೆ ಪೂಜೆ ಸಲ್ಲಿಸಿ ವಾಪಸ್ ತೆರಳುತ್ತಿದ್ದಾಗ ತಿರುವಿನಲ್ಲಿ ಬೈಕ್ ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net