ಬೈಕ್‌ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ

car accident
Published on

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸೊಂದು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಬೈಕ್ ಸವಾರನ ಮೇಲೆ ಬಸ್ಸಿನ ಚಕ್ರ ಹರಿದಿದ್ದರಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳವಾರ 34 ನೆಕ್ಕಿಲಾಡಿಯ ಅಂಬೆಲದ ಬಳಿ ನಡೆದಿದೆ.

ವಿನೋದರ (57) ಎಂಬವರು ಗಾಯಗೊಂಡ ಬೈಕ್ ಸವಾರ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ತಾಗಿದ್ದು, ಆಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಬೈಕಿನೊಂದಿಗೆ ರಸ್ತೆಗೆ ಬಿದ್ದ ಬೈಕ್ ಸವಾರನ ಕೈಯ ಮೇಲೆ ಬಸ್‌ನ ಹಿಂಬದಿ ಚಕ್ರ ಹರಿದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಪುತ್ತೂರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net