ನ್ಯಾಮತಿ ಬಳಿ ಓಮಿನಿ, ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ : ಮೂವರ ಸಾವು

nyamati
Published on

ನ್ಯಾಮತಿ: ತಾಲೂಕಿನ ಶಿವಮೊಗ್ಗ- ಶಿಕಾರಿಪುರ ರಾಜ್ಯ ಹೆದ್ದಾರಿ ಚಿನ್ನಿಕಟ್ಟೆ ಬಳಿ ಗುರುವಾರ ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಓಮಿನಿ ವಾಹನದ ಮಧ್ಯೆೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟು, ಬಸ್‌ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.

ಓಮಿನಿಯಲ್ಲಿದ್ದ ಹರಮಘಟ್ಟದ ನಂಜುಂಡಪ್ಪ (83), ಸೂರಗೊಂಡನಕೊಪ್ಪದ ದೇವರಾಜ್ (27) ಚಾಲಕ ರಾಕೇಶ್ (30) ಮೃತರು.

ಶಿಕಾರಿಪುರ ಕಡೆಯಿಂದ ವೇಗವಾಗಿ ಬರುತ್ತಿದ್ದ ಬಸ್ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಓಮಿನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಮೂವರು ದೇಹಗಳು ಛಿದ್ರಗೊಂಡಿವೆ. ಬಸ್‌ನ ಮುಂಭಾಗದ ಚಕ್ರಗಳು ಕಳಚಿ ಬಸ್ ಸೇತುವೆ ಮೇಲೇರಿ ನಿಂತಿದೆ.

ಗಾಯಗೊಂಡಿದ್ದ ಬಸ್ ಪ್ರಯಾಣಿಕರನ್ನು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ತುರ್ತುವಾಹನದ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net