ಬಸ್ ಡಿಕ್ಕಿ ಹೊಡೆದು ಪಾದಚಾರಿ ಸಾವು

IMG-20231227-WA0054
Published on

ಹಲಗೂರು: ಗ್ರಾಮದ ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಟ್ಟೂರು ಗ್ರಾಮದ ಲೇಟ್ ವೆಂಕಟಯ್ಯ ಅವರ ಪುತ್ರ ನಾರಾಯಣ (52) ಮೃತ ವ್ಯಕ್ತಿ. ಇವರು ಸ್ವಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣದ ಒಳಗೆ ನಡೆದು ಹೋಗುತ್ತಿದ್ದಾಗ ಕನಕಪುರ ಕಡೆಯಿಂದ ಬಂದ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net