ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಮೃತ

Crime Logo
Published on

ಹಾವೇರಿ: ಇಲ್ಲಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಸ್​ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮತಪಟ್ಟಿದ್ದಾರೆ.
ಹರಪನಹಳ್ಳಿ ತಾಲೂಕು ಅರಸನಾಳ ಗ್ರಾಮದ ನೀಲವ್ವ ಹನುಮಂತಪ್ಪ ಬಂಗೇರ (34) ಮೃತ ಮಹಿಳೆ. ಚಿಕ್ಕಬಳ್ಳಾಪುರ ಕೆಎಸ್​ಆರ್​ಟಿಸಿ ಬಸ್​ ಚಾಲಕ ಶ್ರೀಮಂತ ನಿಂಗಪ್ಪ ಮಾಳಾ (46) ಬಸ್​ ಡಿಕ್ಕಿ ಪಡಿಸಿದ ಆರೋಪಿ.
ಈತ ಬಸ್​ ನಿಲ್ದಾಣದ ಆವರಣದಲ್ಲಿ ನಿಂತಿದ್ದ ನೀಲವ್ವಳಿಗೆ ಬಸ್​ ಡಿಕ್ಕಿ ಪಡಿಸಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡ ನೀಲವ್ವಳನ್ನು ಚಿಕಿತ್ಸೆಗಾಗಿ ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಇಲ್ಲಿಯ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net