

ಪಾಂಡವಪುರ: ತಾಲೂಕಿನ ಹಳೆಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೂನಹಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬುಧವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿ, ಹಲವು ವರ್ಷಗಳಿಂದ ಗ್ರಾಮಕ್ಕೆ ಬಸ್ ಸಂಚಾರವಿಲ್ಲದೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಗ್ರಾಮದಿಂದ ಬೇರಡೆಗೆ ತೆರಳಲು ಮುಖ್ಯ ರಸ್ತೆವರೆಗೆ ನಡೆದು ಹೋಗಬೇಕಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಸ್ ಸಂಚಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ವೇಳೆ ಗ್ರಾಮಸ್ಥರು ಕೆಎಸ್‌ಆರ್‌ಟಿಸಿ ಬಸ್ ಸನ್ನು ಹೂವುಗಳಿಂದ ಶೃಂಗರಿಸಿ ಪೂಜೆ ಸಲ್ಲಿಸಿದರು.