ಬಸ್ ಪ್ರಯಾಣಿಕರು ಮಾಸ್ಕ್ ಧರಿಸದೇ ಇದ್ದುದಕ್ಕೆ ಕಂಡಕ್ಟರ್‌ಗೆ ನೋಟಿಸ್!

KSRTC Bus Conductor gets notice for passangers mistake
Published on

ಬೆಂಗಳೂರು: ಮಾಸ್ಕ್ ಧರಿಸದ ಪ್ರಯಾಣಿಕರನ್ನು ಬಸ್‌ನಲ್ಲಿ ಹತ್ತಿಸಿಕೊಂಡಿದ್ದಕ್ಕಾಗಿ ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನಿಗೆ ನೋಟಿಸ್ ನೀಡಲಾಗಿದೆ!

ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಕರೊನಾ ಸೋಂಕು ಹರಡುವುದನ್ನು ತಡೆಯಲು ಪ್ರಯಾಣಿಕರೆಲ್ಲರಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಇತ್ತೀಚೆಗೆ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ, ನಿರ್ವಾಹಕರು ಮಾಸ್ಕ್ ಇಲ್ಲದ ಪ್ರಯಾಣಿಕರನ್ನು ಬಸ್‌ನಲ್ಲಿ ಹತ್ತಿಸಿಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆಯನ್ನು ಈಗಾಗಲೇ ನೀಡಲಾಗಿದೆ.

ಆದರೂ, ರಾಮದುರ್ಗದಿಂದ ಮುನವಳ್ಳಿ ಮಾರ್ಗದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಮೂವರು ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸುತ್ತಿರುವುದು ತಪಾಸಣೆ ವೇಳೆ ಕಂಡು ಬಂದಿದೆ. ಹೀಗಾಗಿ ನಿರ್ವಾಹಕರಿಗೆ ತನಿಖಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net