ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಂಡ KSRTC ನೌಕರ; ಹಳೆಯ ವಿಡಿಯೋ ವೈರಲ್​

Shrishaila Vibhuthi
Published on

ಬಾಗಲಕೋಟೆ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಮ್​ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನಲ್ಲಿ ನಡೆದಿದೆ.

ಮೃತರನ್ನು ಶ್ರೀಶೈಲ ವಿಭೂತಿ (45) ಎಂದು ಗುರುತಿಸಲಾಗಿದ್ದು, ಬೀಳಗಿಯ ತಮ್ಮ ಮನೆಯಲ್ಲಿ ಶನಿವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೀಳಗಿ ಕೆಎಸ್​ಆರ್​ಟಿಸಿ ಬಸ್ ಡಿಪೋ ಮ್ಯಾನೇಜರ್​​​​​​​ ಮತ್ತು ಜಿಲ್ಲಾ ಕಂಟ್ರೋಲರ್​ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿಂದೆ ಅಂದರೆ 2022ರಲ್ಲಿ ಮೇಲಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದ ಶ್ರೀಶೈಲ ಅವರು ಮಾತನಾಡಿದ್ದ ಹಳೆಯ ವಿಡಿಯೋ ಈಗ ಬಹಿರಂಗವಾಗಿದ್ದು, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿ ಬರುತ್ತಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬೀಳಗಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net