ಗದ್ದೆಗೆ ಇಳಿದ ಬಸ್

10 gkp 02
Published on


ವಿಜಯವಾಣಿ ಸುದ್ದಿಜಾಲ ಗೋಣಿಕೊಪ್ಪ
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ಕಳೆದುಕೊಂಡು ಗದ್ದೆಗೆ ಇಳಿದಿದೆ. ಇದರಿಂದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ತಡರಾತ್ರಿ ಮೈಸೂರು ಕಡೆಯಿಂದ ಬೇಗೂರು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಬಸ್ ಎದುರು ದ್ವಿಚಕ್ರ ವಾಹನ ಬಂದಿದೆ. ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಹೋಗಿ ಈ ಅವಘಡ ಜರುಗಿದೆ. ಶುಕ್ರವಾರ ಕ್ರೇನ್ ಮೂಲಕ ಬಸ್ ಮೇಲೆತ್ತಲಾಯಿತು. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net