ಸಾರಿಗೆ ನೌಕರರ ಮುಷ್ಕರ ಮುಂದುವರಿಕೆ, ಎರಡನೇ ದಿನವೂ ಸರ್ಕಾರಿ ಬಸ್‌ಗಳಿಲ್ಲ

Koppal KSRTC Workers Flower Welcome
ಕೊಪ್ಪಳದಲ್ಲಿ ಗುರುವಾರ ಕರ್ತವ್ಯಕ್ಕೆ ಹಾಜರಾದ ಸಾರಿಗೆ ನೌಕರರಿಗೆ ಅಧಿಕಾರಿಗಳು ಹೂ ನೀಡಿ ಸ್ವಾಗತಿಸಿದರು.
Published on

ಕೊಪ್ಪಳ: ಸಾರಿಗೆ ನೌಕರರ ಮುಷ್ಕರ ಗುರುವಾರವೂ ಮುಂದುವರಿಯಿತು. ಮುಷ್ಕರದ ನಡುವೆಯೂ ಕರ್ತವ್ಯಕ್ಕೆ ಹಾಜರಾದ ನೌಕರರಿಗೆ ಅಧಿಕಾರಿಗಳು ಗುಲಾಬಿ ಹೂ ನೀಡಿ ಸ್ವಾಗತಿಸಿದರು.

ಮುಷ್ಕರ ನಿರತ ಸಾರಿಗೆ ನೌಕರರ ಮನವೊಲಿಕೆ ಮುಂದುವರಿದಿದೆ. ಕರ್ತವ್ಯಕ್ಕೆ ಹಾಜರಾಗುವುದಾಗಿ ಏ.6ರಂದು ಸಹಿ ಮಾಡಿ ಮುಷ್ಕರ ಬೆಂಬಲಿಸುತ್ತಿರುವ ನೌಕರರಿಗೆ ಕರೆ ಮಾಡಿ ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಲು ಸೂಚಿಸಲಾಗುತ್ತಿದೆ. ಗುರುವಾರ ಕುಷ್ಟಗಿ ಡಿಪೋದಿಂದ ಎರಡು ಹಾಗೂ ಗಂಗಾವತಿ ಮತ್ತು ಕೊಪ್ಪಳದಲ್ಲಿ ತಲಾ ಒಂದೊಂದು ಬಸ್ ಸಂಚರಿಸಿದವು. ಸರ್ಕಾರ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲಿದೆ. ಜನರಿಗೆ ತೊಂದರೆಯಾಗದಂತೆ ಕೆಲಸ ಮಾಡಬೇಕೆಂದು ಎನ್‌ಇಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎಂ.ಮುಲ್ಲಾ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net