ನಗರ ಬಸ್ ನಿಲ್ದಾಣ ಕಟ್ಟಡ ಕಾಮಗಾರಿಯಲ್ಲಿ ವಿಳಂಬ ಸಲ್ಲದು; ಎಂಡಿ ಸೂಚನೆ

IMG-20240911-WA0028.jpg
Published on

ಬೆಳಗಾವಿ:ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ ಬಸ್ ನಿಲ್ದಾಣ ಕಟ್ಟಡ ಕಾಮಗಾರಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಎಚ್ಚರಿಸಿದರು.

ನಗರದ ಕೇಂದ್ರ ಬಸ್ ನಿಲ್ದಾಣ , ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಹಲವು ವರ್ಷಗಳಿಂದ ಸ್ಮಾರ್ಟ್ ಸಿಟಿ ಯೋಜನೆಯಡಿ ನಿಲ್ದಾಣ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಆದರೆ, ಇಲ್ಲಿಯವರೆಗೆ ಕಾಮಗಾರಿ ಮುಗಿಯುತ್ತಿಲ್ಲ. ಎಲ್ಲವೂ ಅರ್ಧಬರ್ದ ಕಾಮಗಾರಿ ಆಗಿವೆ. ಕೂಡಲೇ ಕಾಮಗಾರಿಗಳ ವೇಗೆ ಹೆಚ್ಚಿಸಬೇಕು ಎಂದು ಸೂಚಿಸಿದರು.

ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗದಂತೆ ನಿಲ್ದಾಣ ಅಧಿಕಾರಿಗಳು ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಾಸ್ ಕೌಂಟರ್‌ಗಳನ್ನು ನಿರ್ವಹಣೆ ಮಾಡಬೇಕು. ಬಸ್ ನಿಲ್ದಾಣಗಳಲ್ಲಿ ಕಳ್ಳತನ ಸೇರಿ ಇತರೆ ಅಪರಾಧ ಪ್ರಕರಣಗಳು ಸಂಭವಿಸಿದಂತೆ ಭದ್ರತೆ ನಿಯೋಜಿಸಬೇಕು. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ವಿಷಯದಲ್ಲಿ ನಿರ್ಲಕ್ಷೃ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸ್ಮಾರ್ಟ ಸಿಟಿಯ ವ್ಯವಸ್ಥಾಪಕ ನಿರ್ದೇಶಕಿ ಸೈಯದ್ ಆಫ್ರಿನ್ ಭಾನು ಎಸ್.ಬಳ್ಳಾರಿ, ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾರ , ಗುತ್ತಿಗೆದಾರರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net