ಕೆ.ಟಿ.ಹನುಮಂತು ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ: ಚನ್ನೈನಲ್ಲಿ ಅಧಿಕಾರ ಹಸ್ತಾಂತರ

KT Hanumantu elected as South Multiple Council President Mandya
Published on

ಮಂಡ್ಯ: ಅಂತಾರಾಷ್ಟ್ರೀಯ ಅಲಯನ್ಸ್ ಸಂಸ್ಥೆ ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷರಾಗಿ ಕೆ.ಟಿ.ಹನುಮಂತು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಚೆನ್ನೈನ ಸವೇರಾ ಹೋಟೆಲ್‌ನಲ್ಲಿ ಮಾ.21ರಿಂದ 23ರವರೆಗೆ ನಡೆದ ಅಲಯನ್ಸ್ ಸಂಸ್ಥೆಯ 17ನೇ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸೌತ್ ಮಲ್ಟಿಪಲ್ ಕೌನ್ಸಿಲ್(ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯ) ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ಆರ್.ಸಕ್ಸೆನಾ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷ ಅಲೈ ಎಸ್.ರಾಜೇಂದ್ರನ್ ಆಯ್ಕೆ ಪತ್ರ ವಿತರಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net