ಕವಿವಿ ಅಂತರ ಮಹಾವಿದ್ಯಾಲಯ ಅಥ್ಲೆಟಿಕ್ಸ್ ಕೂಟ 12ರಿಂದ

7 Dwd 1 (Dr. Ajit Prasad)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ವಿದ್ಯಾಗಿರಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಆತಿಥ್ಯದಲ್ಲಿ ಡಿ. 12ರಿಂದ 14ರವರೆಗೆ ಕರ್ನಾಟಕ ವಿಶ್ವವಿದ್ಯಾಲಯ ಅಧೀನದ 71ನೇ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಜರುಗಲಿದೆ. ಸಂಸ್ಥೆಯು 1957- 58 ಹಾಗೂ 2019ರ ನಂತರ 3ನೇ ಬಾರಿಗೆ ಕ್ರೀಡಾಕೂಟ ಆಯೋಜಿಸುತ್ತಿದೆ. 12ರಂದು ಮಧ್ಯಾಹ್ನ 3.30ಕ್ಕೆ ಅಂತಾರಾಷ್ಟ್ರೀಯ ಕುಸ್ತಿಪಟು, ಪ್ಯಾರಿಸ್ ಒಲಿಂಪಿಯನ್ ಹಾಗೂ 2 ಬಾರಿ ವಿಶ್ವ ಚಾಂಪಿಯನ್ ಆದ ಹರಿಯಾಣದ ಅಂತಿಮ್ ಪಂಗಲ್ ಕ್ರೀಡಾಕೂಟ ಉದ್ಘಾಟಿಸುವರು. ಕೂಟದಲ್ಲಿ ಮಹಿಳೆ, ಪುರುಷರ ಪ್ರತ್ಯೇಕ 44 ಕ್ರೀಡೆಗಳು ಜರುಗಲಿವೆ. 150 ಕಾಲೇಜುಗಳ ಸುಮಾರು 1,000 ಮಹಿಳಾ ಹಾಗೂ ಪುರುಷ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಜೆಎಸ್‌ಎಸ್ ಸಂಸ್ಥೆಯ 68 ಪಟುಗಳು ಭಾಗವಹಿಸುತ್ತಿದ್ದಾರೆ. ಕೂಟ ದಾಖಲೆ ನಿರ್ಮಿಸಿದವರಿಗೆ ಸಂಸ್ಥೆಯಿAದ 10,000 ರೂಪಾಯಿ ನಗದು ಬಹುಮಾನ ನೀಡಲಾಗುವುದು. ಕ್ರೀಡಾಪಟುಗಳು, ತರಬೇತುದಾರರು, ನಿರ್ಣಾಯಕರಿಗೆ ಊಟ, ವಸತಿ, ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಸ್‌ಡಿಎಂ ಹಾಗೂ ಧಾರವಾಡ ಜಿಲ್ಲಾ ಆಸ್ಪತ್ರೆ ಸಹಕಾರದೊಂದಿಗೆ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net