

ಮಂಗಳೂರು : ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹೃದಯದ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಅ.16ರಂದು ಕುಡ್ಲ ರನ್ ಕಾರ್ಯಕ್ರಮ ಆಯೋಜಿಸಿದೆ. ಗಣ್ಯ ವ್ಯಕ್ತಿಗಳು , ಸಾರ್ವಜನಿಕರು, ಸಂಸ್ಥೆಯ ಸಿಬ್ಬಂದಿ, ಶಿಕ್ಷಕ ವರ್ಗ ಮತ್ತು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾಗವಹಿಸಲಿಚ್ಛಿಸುವವರು ಕಾರ್ಯಕ್ರಮದ ದಿನದಂದು ಬೆಳಗ್ಗೆ 6ಕ್ಕೆ ಎ.ಜೆ.ಆಸ್ಪತ್ರೆಯ ಮುಂಭಾಗದಲ್ಲಿ ಹಾಜರಿರಬೇಕು. ವಿಜೇತರಿಗೆ ಆಕರ್ಷಕ ಬಹುಮಾನ ಗೆಲ್ಲವ ಅವಕಾಶವಿದೆ ಎಂದು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ತಿಳಿಸಿದ್ದಾರೆ.