

ಕುಶಾಲನಗರ:
ಕೂಡಿಗೆ ಗ್ರಾಮ ಪಂಚಾಯತಿ ಸಾಮಾನ್ಯ ಸಭೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ. ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆೆ ನೀಡುವುದರ ಜತೆಯಲ್ಲಿ ಎಲ್ಲಾ ವಾರ್ಡ್ಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕೂಡಿಗೆ ಭಾಗದಲ್ಲಿ ಕಾವೇರಿ ಮತ್ತು ಹಾರಂಗಿ ನದಿಗಳು ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಅಂಚಿನಲ್ಲಿ ಮನೆಗಳ ನಿರ್ಮಾಣ ಮಾಡಲು ಹಲವು ಮಂದಿ ಮುಂದಾಗುತ್ತಿದ್ದು, ನದಿ ಅಂಚಿನ ಹದ್ದುಬಸ್ತು ಗುರುತಿಸಿ ಕೊಡುವಂತೆ ಸಂಬAಧಿಸಿದ ಕಂದಾಯ ಇಲಾಖೆಗೆ ಪತ್ರ ವ್ಯವಹಾರ ಮಾಡುವಂತೆ ಸಭೆಯಲ್ಲಿ ಒಕ್ಕೊರಲಿನ ತಿರ್ಮಾನ ಕೈಗೊಳ್ಳಲಾಯಿತು.
ಅಧ್ಯಕ್ಷ ಕೆ.ಟಿ. ಗಿರೀಶ್ ಮಾತಾನಾಡಿ ಸಭೆಯಲ್ಲಿ ಚರ್ಚೆಗೊಂಡ ವಿಷಯಗಳ ಬಗ್ಗೆ ಸಮಗ್ರವಾದ ವ್ಯವಸ್ಥೆ ಕೈಗೊಳ್ಳುವ ಮೂಲಕ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲಾಗುವುದು. ನದಿ ಅಂಚಿನ ಹದ್ದುಬಸ್ತು ಸರ್ವೆ ಕಾರ್ಯವನ್ನು ಕಂದಾಯ ಇಲಾಖೆಯ ಮೂಲಕ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಈಗಾಗಲೇ ನಿವೇಶನಗಾಗಿ ಕಾಯ್ದಿರಿಸಲಾಗಿರುವ ಜಾಗದಲ್ಲಿ ನಿವೇಶನ ರಹಿತರಿಗೆ ನಿವೇಶನದ ಬಗ್ಗೆ ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೊಳ್ಳಲಾಗುವುದು ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜಳಾ ಸಭೆಗೆ ಸÀರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಗೆ ಬಂದ ಸಾರ್ವಜನಿಕ ಅರ್ಜಿಗಳನ್ನು ವಿಲೇವಾರಿ ಮಾಡುವ ಬಗ್ಗೆ ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ಸದಸ್ಯರಾದ ಟಿ.ಪಿ. ಹಮೀದ್, ಮಂಗಳ, ಮೋಹಿನಿ, ಅರುಣ್ ರಾವ್, ಕೆ.ಎಸ್. ಶಿವಕುಮಾರ್, ಅನಂತ, ವಾಣಿ, ಹೆಚ್.ಎಸ್. ರವಿ, ಲಕ್ಷಿ, ಚಂದ್ರು, ಜಯಶೀಲಾ, ಕಾರ್ಯದರ್ಶಿ ಪುನೀತ್ ಇದ್ದರು.