ಕೂಡಿಗೆ ಗ್ರಾ.ಪಂ. ವಿಶೇಷ ಗ್ರಾಮ ಸಭೆ

23Kush01
Published on

ಕುಶಾಲನಗರ: ಕೂಡಿಗೆ ಗ್ರಾಮ ಪಂಚಾಯಿತಿಯ 2023-24 ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸಂಬಂಧಿಸಿದ ವಿಶೇಷ ಗ್ರಾಮ ಸಭೆ ಅಧ್ಯಕ್ಷ ಕೆ.ಟಿ.ಗಿರೀಶ್ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳುವ ವಿವಿಧ ಕಾಮಗಾರಿಗಳು ಸೇರಿದಂತೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ, ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆದವು.


ಕೆ.ಟಿ ಗಿರೀಶ್ ಮಾತನಾಡಿ, ಗ್ರಾಮಸ್ಥರು ಉದ್ಯೋಗ ಖಾತ್ರಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು ಯೋಜನೆ ಸೌಲಭ್ಯ ಪಡೆಯುವಂತೆ ಮನವಿ ಮಾಡಿದರು.

ಸಭೆಯ ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕಿನ ಕೃಷಿ ಸಹಾಯಕ ನಿರ್ದೇಶಕ ಯಾದವ್ ಬಾಬು ಆಗಮಿಸಿದ್ದರು. ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಮೋಹಿನಿ ತಮ್ಮಣೇಗೌಡ, ಮಂಗಳಾ, ಜಯಶೀಲಾ, ಅಭಿವೃದ್ಧಿ ಅಧಿಕಾರಿ ಮಂಜಳಾ, ಕಾರ್ಯದರ್ಶಿ ಪುನಿತ್ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net