ಕೂಡಿಗೆಯ ಸೈನಿಕ ಶಾಲೆ ವಿದ್ಯಾರ್ಥಿಗಳ ತಂಡ ಪ್ರಥಮ

6.npk-1..
ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಿಂದ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿ. ಮೇಕೆರಿರ ಕಾರ್ಯಪ್ಪ ಸ್ಮರಣಾರ್ಥ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆಯ ಸೈನಿಕ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
Published on

ಮೇಕೆರಿರ ಕಾರ್ಯಪ್ಪ ಸ್ಮರಣಾರ್ಥ ಜಿಲ್ಲಾಮಟ್ಟದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆ

 ನಾಪೋಕ್ಲು ; ಇಲ್ಲಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಿಂದ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿ. ಮೇಕೆರಿರ ಕಾರ್ಯಪ್ಪ ಸ್ಮರಣಾರ್ಥ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆಯ ಸೈನಿಕ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿತು.

ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಸ್ಥಾನ ಲಭಿಸಿತು. ತೃತೀಯ ಸ್ಥಾನವನ್ನು ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ತಂಡ ಪಡೆದುಕೊಂಡರು. ಸಮಾಧಾನಕರ ಬಹುಮಾನಗಳನ್ನು ಮೂರ್ನಾಡು ಕೋಡಂಬೂರಿನ ಜ್ಞಾನಜ್ಯೋತಿ ಎಜುಕೇಶನ್ ಸೊಸೈಟಿ ಹಾಗೂ ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ಶಾಲಾ ತಂಡಗಳು ಪಡೆದುಕೊಂಡವು. ಸ್ಪರ್ಧೆಯಲ್ಲಿಒಟ್ಟು 16 ತಂಡಗಳು ಪಾಲ್ಗೊಂಡಿದ್ದವು.

ಕೂಡಿಗೆಯ ಸೈನಿಕ್ ಶಾಲೆಯ ವಿದ್ಯಾರ್ಥಿಗಳಾದ ಶಿವಕಾಂತ್ ಯಾದವ್, ಓಂಕಾರ್ ಎಸ್. ಪಮ್ಮರ್, ಅತುಲ್ ಕುಮಾರ್ ಹಾಗೂ ಋಷಿಕೇಶ್ ರೂಗಿ 142 ಅಂಕಗಳಿಸಿ ಪ್ರಥಮ ಸ್ಥಾನ ಗಳಿಸಿತು. ವಿಜೇತ ತಂಡಕ್ಕೆ 5000 ರೂ. ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಹರ್ಷ್ ಕಾರಿಯಪ್ಪ, ಪಿ.ಎಸ್.ಸಹನಾ, ವಿ.ಯು.ಮಿಸ್ಬಾ 81 ಅಂಕ ಗಳಿಸಿ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಈ ತಂಡಕ್ಕೆ 4000 ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ್ ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ.ಜ್ಞಾನ ವೃದ್ಧಿಸಿಕೊಂಡು ಉತ್ತಮ ಸಮಾಜವನ್ನು ವಿದ್ಯಾರ್ಥಿಗಳು ನಿರ್ಮಾಣ ಮಾಡಬೇಕು ಎಂದರು.

ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನೆರವಂಡ ಸುನಿಲ್ ಬೋಪಯ್ಯ, ನಿರ್ದೇಶಕರಾದ ಪ್ರೊ. ಕಲ್ಯಾಟಂಡ ಪೂಣಚ್ಚ, ಮಕ್ಕಿ ಸುಬ್ರಹ್ಮಣ್ಯ ಭಟ್, ಚೌರಿರ ಮಂದಣ್ಣ, ನಾಯಕಂಡ ದೀಪಕ್ ಚಂಗಪ್ಪ, ಬೊಳ್ಳಚೆಟ್ಟಿರ ಸುರೇಶ್, ವಿವಿಧ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕ್ಷಿಜ್ ಮಾಸ್ಟರ್ ಆಗಿ ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್.ಸುರೇಶ್ ಹಾಗೂ ಮಡಿಕೇರಿ ಬಿಆರ್‌ಸಿ ಕೇಂದ್ರದ ಕಂಪ್ಯೂಟರ್ ಪ್ರೊಗ್ರಾಮರ್ ಡಿ.ಎಸ್.ಪ್ರಸಾದ್, ಶಿಕ್ಷಕರಾದ ಕಾಳಯ್ಯ, ಚಂದ್ರಕಲಾ, ಸ್ಮಿತಾ, ಪ್ರಾಂಶುಪಾಲೆ ಬಿ.ಎಂ.ಶಾರದಾ, ಶಿಕ್ಷಕಿ ಶೋಭಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net