

ಕೂಡ್ಲಿಗಿ: ಗೀತ ಗಾಯನ ಸ್ಪರ್ಧೆಯಿಂದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳ್ಳಲು ಸಹಕಾರಿ ಎಂದು ಬಿಇಒ ಪದ್ಮನಾಭ ಕರಣಂ ಹೇಳಿದರು.
ಪಟ್ಟಣದ 7ನೇ ವಾರ್ಡ್ ಬಂಡ್ರಿ ಲಕ್ಷ್ಮೀದೇವಿ ಚಿನ್ನಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸ್ಥಳೀಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ದೇಶಪ್ರೇಮ, ರಾಷ್ಟ್ರಭಕ್ತಿ ಹೆಚ್ಚಿಸಲು, ಮಕ್ಕಳಿಗೆ ಶಿಕ್ಷಣದ ಜತೆಗೆ ಭಾರತೀಯ ಇತಿಹಾಸ, ಸಂಸ್ಕೃತಿ ಬಗ್ಗೆ ಅರಿವು ಮೂಡಿಸಲು ಇಂತಹ ಸ್ಪರ್ಧೆಗಳು ಅವಶ್ಯಕ ಎಂದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಶಿವಪುತ್ರ ಸ್ವಾಮಿ, ಶಿಕ್ಷಣ ಸಂಯೋಜಕ ಆನಂದ್ ದೇವರಕೊಳ್ಳದ, ಶಿಕ್ಷಕರಾದ ಆರ್.ಬಿ.ಬಸವರಾಜ, ಶಾಂತಕುಮಾರಿ, ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಕಾರ್ಯದರ್ಶಿ ಟಿ.ತಿಂದಪ್ಪ, ಖಜಾಂಚಿ ವಿ.ಹನುಮೇಶ್, ದಳ ನಾಯಕರಾದ ಮಂಜುನಾಥ, ವೀರಭದ್ರ ಗೌಡ, ಸರ್ವಮಂಗಳ, ಮಂಜುಳಾ, ಯಶೋದಾ, ವಿಜಯಲಕ್ಷ್ಮೀ ಪಾಲ್ಗೊಂಡಿದ್ದರು.
ಶಿಕ್ಷಕರಾದ ಮಂಜುನಾಥ, ಮಮತಾ, ಶಾಂತಾ, ವಿಜಯ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.