ರೈತರು-ವರ್ತಕರ ಹಿತರಕ್ಷಣೆಗೆ ಆದ್ಯತೆ

Kudligi APMC market
ಕೂಡ್ಲಿಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಉತ್ಪನ್ನಗಳ ಖರೀದಿಗೆ ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಯ್ಯ ಚಾಲನೆ ನೀಡಿದರು. ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಎಪಿಎಂಸಿ ಉಪಾಧ್ಯಕ್ಷ ಮಹಾದೇವಪ್ಪ, ತಾಲೂಕು ಪ್ರಾಥಮಿಕ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ಎಪಿಎಂಸಿ ನಿರ್ದೇಶಕರಾದ ಟಿ.ಜಿ.ಮಲ್ಲಿಕಾರ್ಜುನಗೌಡ, ಕಟ್ಟೆ ಬಸಣ್ಣ, ಲಿಂಗನಗೌಡ, ರಾಘವೇಂದ್ರ ಶೆಟ್ಟಿ, ರಂಗಾ ಶ್ರೀನಿವಾಸ್, ಮಾಳ್ಗಿ ನಾಗರಾಜ, ಎಚ್.ವೀರಣ್ಣ, ತಿಪ್ಪೇಸ್ವಾಮಿ ಇದ್ದರು.
Published on

ಕೂಡ್ಲಿಗಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಉತ್ಪನ್ನಗಳ ಖರೀದಿಗೆ ಚಾಲನೆ ನೀಡಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಯ್ಯ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ರೈತರ ಉತ್ಪನ್ನಗಳ ಖರೀದಿಗೆ ಚಾಲನೆ ನೀಡಿ ಮಾತನಾಡಿದರು. ರೈತರು ಉತ್ಪನ್ನಗಳನ್ನು ಮಾರಾಟ ಮಾಡಲು ಮತ್ತು ವರ್ತಕರು ಖರೀದಿ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಮಾರುಕಟ್ಟೆ ನಿಯಮಗಳನ್ನು ಪಾಲಿಸುವ ಮೂಲಕ ರೈತರು ಹಾಗೂ ವರ್ತಕರ ಹಿತ ಕಾಯಲಾಗುವುದು. ರೈತರ ಬೆಳೆಗಳಿಗೆ ಉತ್ತಮ ಬೆಲೆ ಹಾಗೂ ಸಮರ್ಪಕ ತೂಕ ಇರುವಂತೆ ನೋಡಿಕೊಳ್ಳಲಾಗುವುದು ಎಂದರು.

ತಾಲೂಕು ಪ್ರಾಥಮಿಕ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ ಮಾತನಾಡಿ, ಕೊಟ್ಟೂರು ಎಪಿಎಂಸಿ ಉಪ ಮಾರುಕಟ್ಟೆಯಾಗಿದ್ದು, ಉನ್ನತೀಕರಿಸಿ ಪೂರ್ಣ ಪ್ರಮಾಣದ ಮಾರುಕಟ್ಟೆಯನ್ನಾಗಿ ಮಾಡಲಾಗಿತ್ತು. ಆದರೆ ಅಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿರಲಿಲ್ಲ. ಶಾಸಕ ಡಾ.ಶ್ರೀನಿವಾಸ್ ಅವರ ಇಚ್ಛಾಶಕ್ತಿಯಿಂದ ಎಪಿಎಂಸಿ ಸಮಿತಿಯೂ ರಚನೆಯಾಗಿದ್ದು, ವ್ಯಾಪಾರ ವಹಿವಾಟು ಕೂಡ ಆರಂಭವಾಗಿದೆ. ಪ್ರತಿ ದಿನ ಖರೀದಿದಾರರು ರೈತರ ಉತ್ಪನ್ನಗಳನ್ನು ಖರೀದಿ ಮಾಡಲಿದ್ದಾರೆ ಎಂದರು.

ಕಾರ್ಯದರ್ಶಿ ಎಸ್. ಸಿ.ಬಸವರಾಜ, ವರ್ತಕರ ಸಂಘದ ಅಧ್ಯಕ್ಷ ಎಸ್. ಟಿ.ರಾಮಸ್ವಾಮಿ ಶೆಟ್ಟಿ, ಗೌತಮ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net