

ಕೂಡ್ಲಿಗಿ: ತಾಲೂಕಿನಲ್ಲಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಸರ್ಕಾರ ಅಸ್ತು ಎಂದಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ, ಪಟ್ಟಣದ ಹೊರವಲಯದ ಗುಂಡಿನ ಹೊಳೆ ಬೀಜೋತ್ಪಾದನಾ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲು ಕೃಷಿ ಇಲಾಖೆ ಅಧೀನ ಕಾರ್ಯದರ್ಶಿ ಡಿಸಿ ಎಂ.ಎಸ್.ದಿವಾಕರ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
ಗುಂಡಿನ ಹೊಳೆ ಬೀಜೋತ್ಪಾದನಾ ಕೇಂದ್ರದ ಬಳಿ 50 ಎಕರೆ ಭೂಮಿ ನೀಡಲು ಸೂಚನೆ ನೀಡಿದ್ದು, ಶೀಘ್ರ ರಾಯಚೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಅಡಿಯಲ್ಲಿ ಇಲ್ಲಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆಯಾಗಲಿದೆ ಎಂದರು.
ಕೇಂದ್ರಕ್ಕೆ ಸಂಬಂಧಿಸಿದ ಜಿಲ್ಲಾ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಲಿದೆ ಎಂದರು. ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ ಇತರರಿದ್ದರು.