ಸರ್ವಾಗೀಣ ಅಭಿವೃದ್ಧಿಗೆ ಕೈಜೋಡಿಸುವೆ- ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ

040322 Kudligi BJP activists meeting
ವಿಜಯನಗರ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಸಂಜೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತಾನಾಡಿದರು.
Published on

ಕೂಡ್ಲಿಗಿ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಕೈಜೋಡಿಸುವುದಾಗಿ ಮುಜರಾಯಿ, ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತಾನಾಡಿದರು. ಜಿಲ್ಲೆಯಾದ್ಯಂತ ಈಗಾಗಲೇ ಪ್ರವಾಸ ಆರಂಭಮಾಡಿದ್ದು, ಮುಂದಿನ ದಿನಗಳಲ್ಲಿ ಕೂಡ್ಲಿಗಿ ಕ್ಷೇತ್ರದ ಪ್ರವಾಸ ಕೈಗೊಂಡು ಸಮಸ್ಯೆಗಳು, ಬೇಕಾದ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಲಾಗುವುದು. ಆದಯತೆ ಮೇರೆಗೆ ಪರಿಹರಿಸಲಾಗುವುದು. ಸಮಸ್ಯೆಗಳ ಬಗ್ಗೆ ಯಾವುದೇ ಸಮಯದಲ್ಲೂ ಕಾರ್ಯಕರ್ತರು ನನಗೆ ದೂರವಾಣಿ ಕರೆ ಮಾಡಬಹುದು. ಇಲ್ಲವೇ ಖುದ್ದಾಗಿ ಭೇಟಿ ಮಾಡಿ ತಿಳಿಸಬಹುದು. ಪಕ್ಷ ನಿಮಗೆ ಜವಾಬ್ದಾರಿ ನೀಡಿದೆ. ಅದಕ್ಕೆ ಪೂರಕವಾಗಿ ಶ್ರಮಿಸಿ, ಬೇರು ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಪಾಟೀಲ್ ಚೆನ್ನಬಸವನಗೌಡ, ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಪಾಪಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಪಿ.ಮಂಜುನಾಥ ನಾಯಕ, ಮುಖಂಡರಾದ ಬಿ.ಭೀಮೇಶ, ಎಸ್.ದುರುಗೇಶ, ಗುನ್ನಳ್ಳಿ ನಾರಯಣ, ಮಂಜುನಾಥ್, ಪಪಂ ಸದಸ್ಯರಾದ ಪಿ.ಚಂದ್ರು, ಸಚಿನ್ ಕುಮಾರ್, ಎ.ಎಂ.ವಾಗೀಶಮೂರ್ತಿ, ಗುಳಿಗಿ ವೀರೇಶ, ಶ್ರೀಕಾಂತ, ರಮೇಶ, ಅಜೇಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net