

ಕೂಡ್ಲಿಗಿ: ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ ಬಿಎಲ್‌ಒಗಳಿಗೆ ಹಾಜರಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಸೋಮವಾರ ತಹಸೀಲ್ದಾರ್ ಎಂ.ರೇಣುಕಾಗೆ ಮನವಿ ಸಲ್ಲಿಸಿದರು.
ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್ ಮಾತನಾಡಿ, ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರು ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬೇಸಿಗೆ ರಜೆ ಅವಧಿಯಲ್ಲೂ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.
ರಾಯಚೂರು ತಹಸೀಲ್ದಾರ್ ಹಾಗೂ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರು ಬಿಎಲ್‌ಒಗಳಾಗಿ ಕರ್ತವ್ಯನಿರ್ವಹಿಸಿದ ಶಿಕ್ಷಕರಿಗೆ ಹಾಜರಾತಿ ಪ್ರಮಾಣ ಪತ್ರ ನೀಡಿ ಗಳಿಕೆ ರಜೆ ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಆದ್ದರಿಂದ ಕೆಸಿಎಸ್‌ಆರ್ ನಿಯಮ 113/3/ಎ ಅನ್ವಯ ಗಳಿಕೆ ರಜೆ ಪಡೆಯಲು ನಿಯಮಾವಳಿಯಂತೆ ತಾಲೂಕಿನ ಶಿಕ್ಷಕರಿಗೆ ಹಾಜರಾತಿ ಪ್ರಮಾಣ ನೀಡಬೇಕು ಎಂದು ಒತ್ತಾಯಿಸಿದರು.
ಸಂಘದ ಪದಾಧಿಕಾರಿಗಳಾದ ಆರ್.ಬಿ.ತಿಪ್ಪೇರುದ್ರಪ್ಪ, ಇಮ್ರಾನ್ ಇತರರಿದ್ದರು.