ಮುಖ್ಯಮಂತ್ರಿ ಬದಲಾವಣೆ ಸುಲಭವಲ್ಲ: ಸಂಸದ ವೈ.ದೇವೇಂದ್ರಪ್ಪ ಹೇಳಿಕೆ

Y Devendrappa MP Bellary
Published on

ಕೂಡ್ಲಿಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುಲಭವಲ್ಲ ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಹೈಕಮಾಂಡ್ ಬಹಳ ಬಿಗಿ ಇದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಬದಲಾವಣೆ ಮಾಡುವುದು ಸುಲಭವಿಲ್ಲ.

ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಶಾಸಕರು, ಸಚಿವರು, ಸಂಸದರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ನನಗೆ ಕರೆ ಬಂದರೆ ಹೋಗುವೆ ಎಂದರು. ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ. ಅದಕೆಲ್ಲ ವಿರೋಧ ಪಕ್ಷಗಳೇ ಕಾರಣ. ಈ ಹಿಂದೆ ಆಡಳಿತ ಮಾಡಿದ ಸರ್ಕಾರ ತೈಲಕ್ಕಾಗಿ ಮಾಡಿದ ಸಾಲವನ್ನು ಪ್ರಧಾನಿ ನರೇಂದ್ರ ಮೋದಿ ಬಡ್ಡಿ ಸಮೇತ ತೀರಿಸುತ್ತಿದ್ದಾರೆ. ಇದನ್ನು ವಿರೋಧ ಪಕ್ಷಗಳು ಮನಗಾಣಬೇಕು ಎಂದು ತಿರುಗೇಟು ನೀಡಿದರು. ಕೇಂದ್ರ ಸಚಿವರು, ಸಂಸದರ ಮನವಿ ಮೇರೆಗೆ ಸರ್ಕಾರ ರಸಗೊಬ್ಬರ ಬೆಲೆ 1200 ರೂ.ಗೆ ಇಳಿಸಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net