ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರೂಪಿಸಿ

121222 Kudligi Farmers Union Appeal
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಕೂಡ್ಲಿಗಿಯಲ್ಲಿ ಗ್ರೇಡ್-2 ತಹಸೀಲ್ದರ್ ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು.
Published on

ಕೂಡ್ಲಿಗಿ: ಕೃಷಿ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ರಾಜ್ಯ ಸರ್ಕಾರವೂ ಅಧಿವೇಶನದಲ್ಲಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಸೇನೆಯ ಮುಖಂಡ ದೇವರಮನಿ ಮಹೇಶ್ ಮಾತಾನಾಡಿ, ತಾನು ಬೆಳೆದ ಬೆಳೆಗಳಿಗೆ ರೈತನೇ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಹೋಬಳಿಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಸ್ವಾಮಿನಾಥನ್ ಆಯೋಗದ ವರದಿಯ ಶಿಫಾರಸಿನಂತೆ ಕನಿಷ್ಠ ಶೇ.50 ಲಾಭಾಂಶ ಸೇರಿಸಿ ರೈತರ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ಅತಿವೃಷ್ಟಿಯಿಂದ ನಷ್ಟ ಹೊಂದಿದ ರೈತರಿಗೆ ಪರಿಹಾರ ನೀಡಬೇಕು. ಗುಡಿಸಲು, ಮಾಳಿಗೆ, ಮನೆ ಬಿದ್ದಂತಹ ಸಂತ್ರಸ್ತರಿಗೆ ಮನೆಗಳನ್ನ ಒದಗಿಸಬೇಕು. ಪ್ರತಿ ಟನ್ ಕಬ್ಬಿಗೆ 3,500 ರೂ., ಭತ್ತಕ್ಕೆ 2,500 ರೂ. ನೀಡಬೇಕು. ಜಿಲ್ಲೆಯ ಎಲ್ಲ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎನ್.ಭರಮಣ್ಣ, ಜಿಲ್ಲಾಧ್ಯಕ್ಷ ಎಂ.ದಾನೇಶ್, ಜಡಿಯಪ್ಪ, ಬಣಕಾರ ಚನ್ನಬಸಪ್ಪ, ಹೊಸಪೇಟೆ ತಾಲೂಕು ಅಧ್ಯಕ್ಷ ಕೆ.ಮಲ್ಲಿಕಾರ್ಜುನ, ಕೆ.ಮೂರ್ತಿ,ಕೆ.ತಿಮ್ಮಕ್ಕ, ಸೂಫಿಯಾನ ಪಾಟೇಲ್ ಸೇರಿದಂತೆ ಅನೇಕ ರೈತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net