ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ ಅಪಾರ

Kudligi Science Exhibition
ಗೆದ್ದಲಗಟ್ಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಾದ ಭಾಗ್ಯಮ್ಮ ಮತ್ತು ಪಲ್ಲವಿಯನ್ನು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಸನ್ಮಾನಿಸಿದರು. ಮುಖ್ಯಶಿಕ್ಷಕ ಜಿ.ಜಗದೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಟಿ.ಎಚ್.ಎಂ.ಶೇಖರಯ್ಯ, ಗ್ರಾಪಂ ಅಧ್ಯಕ್ಷೆ ಚನ್ನಮ್ಮ ರಾಮಪ್ಪ, ಸದಸ್ಯರಾದ ರಾಮಸ್ವಾಮಿ, ಪಂಕಜಾ ತಿಪ್ಪೇಸ್ವಾಮಿ, ಬಸವರಾಜಪ್ಪ ಇದ್ದರು.
Published on

ಕೂಡ್ಲಿಗಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಇರಬಾರದು ಎಂದು ಶಾಸಕ ಎನ್.ಟಿ.ಶ್ರೀನಿವಾಸ್ ಹೇಳಿದರು.

ಗೆದ್ದಲಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀನಿವಾಸ ರಾಮಾನುಜನ್ ಗಣಿತ ಪ್ರಯೋಗಾಲಯ, ವಿಜ್ಞಾನ ವಸ್ತು ಪ್ರದರ್ಶನ, ಹೈಟೆಕ್ ಶೌಚಗೃಹ ಮತ್ತು ಶಾಲೆ ಕಾಂಪೌಂಡನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರಮಟ್ಟದ ವಿವಿಧ ಕ್ಷೇತ್ರಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚು ಗಮನ ಸೆಳೆದಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳನ್ನು ವಿಶೇಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುವುದು. ಗ್ರಾಪಂ ಅನುದಾನ ಬಳಸಿ ಶಾಲೆಯಲ್ಲಿ ಹೈಟೆಕ್ ಶೌಚಗೃಹ ನಿರ್ಮಿಸಿರುವುದು ಜಿಲ್ಲೆಗೆ ಮಾದರಿಯಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಚನ್ನಮ್ಮ ರಾಮಪ್ಪ, ಉಪಾಧ್ಯಕ್ಷೆ ಪಾಪಕ್ಕ ಬಸವರಾಜ, ಸದಸ್ಯರಾದ ರಾಮಸ್ವಾಮಿ, ಪಂಕಜಾ ತಿಪ್ಪೇಸ್ವಾಮಿ, ಬಸವರಾಜಪ್ಪ, ಜರ್ಮಲಿ ವಿಎಸ್‌ಎಸ್‌ಎನ್ ಅಧ್ಯಕ್ಷ ಹನುಮಂತರಾಯ, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಬಿ.ಶಿವಾನಂದ, ತಾಲೂಕು ಅಧ್ಯಕ್ಷ ಜಿ.ಕೊಟ್ರೇಶ್, ಕಾರ್ಯದರ್ಶಿ ಟಿ.ಎಚ್.ಎಂ.ಶೇಖರಯ್ಯ, ಉಪಾಧ್ಯಕ್ಷ ಎಚ್.ಜಿ.ಹನುಮಂತಪ್ಪ, ಸಂಘಟನಾ ಕಾರ್ಯದರ್ಶಿ ಎಚ್.ಗೋಣಿಬಸಪ್ಪ, ಮುಖ್ಯಶಿಕ್ಷಕ ಜಿ.ಜಗದೀಶ್, ಪ್ರಮುಖರಾದ ಹನುಮೇಶ, ಜಿ.ರಮೇಶ, ಜಿ.ಸಿದ್ದನ ಗೌಡ, ನಾಗಲಿಂಗಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net