ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಲಿ

Kudligi sports
ಕೂಡ್ಲಿಗಿಯಲ್ಲಿ ಕ್ರೀಡಾಕೂಟಕ್ಕೆ ಜ್ಞಾನಭಾರತಿ ಸಂಸ್ಥೆ ಆಡಳಿತಾಧಿಕಾರಿ ಅಧಿಕಾರಿ ಜಿ.ಆರ್.ರಾಜು ಚಾಲನೆ ನೀಡಿದರು. ಪ್ರಾಚಾರ್ಯ ಎಚ್.ಎಂ.ವಿಜಯಕುಮಾರ್, ಉಪನ್ಯಾಸಕ ಎನ್.ಬಸವರಾಜ, ಫಾರ್ಮಸಿ ವಿಭಾಗದ ಮುಖ್ಯಸ್ಥ ಡಾ.ಜಯಚಂದ್ರ, ಉಪನ್ಯಾಸಕ ರಾದ ಅರ್ಚನಾ, ನಾಗರತ್ನಾ, ಎನ್.ಬಸವರಾಜ, ಕೆ.ನಾಗರಾಜ ಇತರರಿದ್ದರು.
Published on

ಕೂಡ್ಲಿಗಿ: ದೈಹಿಕ ಸದೃಢತೆ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಜ್ಞಾನಭಾರತಿ ಸಮೂಹ ಸಂಸ್ಥೆ ಆಡಳಿತಾಧಿಕಾರಿ ಜಿ.ಆರ್.ರಾಜು ಹೇಳಿದರು.

ಪಟ್ಟಣದ ಜ್ಞಾನಭಾರತಿ ಮತ್ತು ವೈ.ಎಸ್.ಎಸ್ ಸಮೂಹ ಸಂಸ್ಥೆ ಅಡಿಯಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಶುಕ್ರವಾರ ಮಾತನಾಡಿದರು. ಇಂದಿನ ಯುವ ಜನಾಂಗ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಮೊಬೈಲ್ ಬಳಕೆ ಕಡಿಮೆಮಾಡಿ ವಿದ್ಯಾಭ್ಯಾಸದತ್ತ ಗಮನಹರಿಸಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಶಾರೀರಿಕ ಹಾಗೂ ಭೌತಿಕ ಬೆಳವಣಿಗೆಯಾಗುತ್ತದೆ. ಕ್ರೀಡಾಪಟುಗಳು ಸೋಲು ಗೆಲುವಿನ ಬಗ್ಗೆ ಗಮನ ಹರಿಸದೇ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ಎಚ್.ಎಂ ವಿಜಯಕುಮಾರ ಮಾತನಾಡಿ, ಆಟ ದಲ್ಲಿ ಸೋಲು- ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ. ವಿದ್ಯಾರ್ಥಿಗಳು ಹೆಚ್ಚು ಕ್ರೀಡೆಗಳಲ್ಲಿ ತೊಡಗುವುದರಿಂದ ಉತ್ತಮ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗುತ್ತದೆ ಎಂದರು. ಉಪನ್ಯಾಸಕ ರಾದ ಅರ್ಚನಾ, ನಾಗರತ್ನಾ, ಎನ್.ಬಸವರಾಜ, ಕೆ.ನಾಗರಾಜ, ಶಿಕ್ಷಕರಾದ ನಾಗೇಂದ್ರ, ಮಂಜುನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net