ಕೂಡ್ಲೂರು ಮೂಲ ಸೌಕರ್ಯಗಳ ಅಭಿವೃದ್ಧಿಗೆ 50 ಲಕ್ಷ ರೂ.

kudlur
Published on

ಕುಶಾಲನಗರ:

ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ನವಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿಗೆ 50 ಲಕ್ಷ ರೂ. ಹಣ ಮಂಜೂರುಗೊಳಿಸಲಾಗಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಶನಿವಾರ ಸಂಜೆ ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಬಸವೇಶ್ವರ ಯುವಕ ಸಂಘದ ಕಬಡ್ಡಿ ಟೂರ್ನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನಕ್ಕೆ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ರೂ. ಅನುದಾನ ಒದಗಿಸಲಾಗುವುದು. ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಹೆಚ್ಚು ಕ್ರೀಡಾ ಚಟುವಟಿಕೆಗಳು ನಡೆಯುವುದರಿಂದ ಮತ್ತು ಶಾಲಾ ಮಕ್ಕಳ ಕ್ರೀಡೆಗಳಿಗೆ ಸುಸಜ್ಜಿತ ಮೈದಾನದ ಕೊರತೆ ಇರುವುದರಿಂದ ಈ ಮೈದಾನವನ್ನು ಸಮತಟ್ಟುಗೊಳಿಸಲು ಸೂಕ್ತ ಅನುದಾನವನ್ನು ಒದಗಿಸುವಂತೆ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರೇಮಕುಮಾರ್, ಶಾಸಕರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಶಾಸಕ ಡಾ ಮಂತರ್ ಗೌಡ ಪ್ರತಿಕ್ರಿಯಿಸಿ ಈ ಭರವಸೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ ಕೂಡ್ಲೂರು ನವಗ್ರಾಮದ ಗ್ರಾಮಸ್ಥರ ಮನವಿ ಸ್ಪಂದಿಸಿರುವ ಶಾಸಕರು, ನವಗ್ರಾಮದಲ್ಲಿ ಸೂಕ್ತ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ . ಇದು ಈ ಗ್ರಾಮಸ್ಥರಿಗೆ ಸಂತಸದ ಸಂಗತಿಯಾಗಿದೆ ಎಂದರು.

ಗ್ರಾಮದ ಪ್ರಮುಖರು ಈ ವೇಳೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net