ಎಸ್.ಪುಣಿಂಚಿತ್ತಾಯಗೆ ಕಸಾಪ ಅಭಿನಂದನೆ

New Project (45)
Published on

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ‘ಸಾಹಿತ್ಯ ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ’ ಕಾರ್ಯಕ್ರಮದಂಗವಾಗಿ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರಕಲಾವಿದ ಪುಂಡೂರು ಶಂಕರನಾರಾಯಣ ಪುಣಿಂಚಿತ್ತಾಯ ಅವರನ್ನು ಕಾರಡ್ಕದ ನಿವಾಸದಲ್ಲಿ ಅಭಿನಂದಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಪ್ರೊ.ಪಿ.ಎನ್.ಮೂಡಿತ್ತಾಯ ಅಭಿನಂದನಾ ಭಾಷಣ ಮಾಡಿದರು.

ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net