

ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ನೀಡುತ್ತಿರುವ ಕರಾಟೆ ಶಿಕ್ಷಕ ಸಂದೀಪ್ ಕಿರಣ್ ಕುಮಾರ್ ಅವರನ್ನು ಸುಣ್ಣಾರಿಯ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಸಂದೀಪ್ ಕಿರಣ್ ಕುಮಾರ್‌ರವರ ಉತ್ತಮ ತರಬೇತಿಯಿಂದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿನಿ ನವಮಿ ಎಸ್. ಶೆಟ್ಟಿ ಅವರು ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದರು.
ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ.ಮಹೇಶ್ ಹೆಗ್ಡೆ, ಕೋಟೇಶ್ವರ ಕೆಪಿಎಸ್ ಶಾಲೆ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ, ಲೇಖಕ ಸಿ.ಎ.ಗೋಪಾಲಕೃಷ್ಣ ಭಟ್, ಜಿಲ್ಲಾ ವಯಸ್ಕ ಶಿಕ್ಷಣಾಧಿಕಾರಿ ಯೋಗ ನರಸಿಂಹ ಸ್ವಾಮಿ, ತಾಲೂಕು ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘ ಅಧ್ಯಕ್ಷ ಅಬ್ದುಲ್ ರವೂಫ್, ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ ಶೆಟ್ಟಿ, ಪ್ರೌಢಶಾಲಾ ಸಹಶಿಕ್ಷಕರ ಸಂಘ ಅಧ್ಯಕ್ಷ ಉದಯಕುಮಾರ ಶೆಟ್ಟಿ, ಸುಣ್ಣಾರಿ ಎಕ್ಸಲೆಂಟ್ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸರೋಜಿನಿ ಆಚಾರ್ಯ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.