

ವಿರಾಜಪೇಟೆ: ಮೈಸೂರು ವಿಶ್ವವಿದ್ಯಾಲಯದ ಎಂಪಿಎಡ್ ವಿಭಾಗದಲ್ಲಿ ಚಿನ್ನದ ಪದಕ ಪಡೆದು ಸಾಧನೆ ಮಾಡಿದ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿ.ಆರ್.ಶಬರೀಶ್ ಅವರನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ಬುಧವಾರ ಸನ್ಮಾನಿಸಲಾಯಿತು.
ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಾಕರ್ ಅವರು ಶಬರೀಶ್ ಅವರನ್ನು ಸನ್ಮಾನಿಸಿ ಮಾತನಾಡಿ, ಶಿಕ್ಷಕ ಶಬರೀಶ್ ಅವರು ಈ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ. ಅವರ ಕ್ರಿಯಾಶೀಲತೆ, ಶಿಸ್ತು ಮತ್ತು ಕಾರ್ಯವೈಖರಿ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ. ಈ ಹಿಂದೆಯೂ ಅವರು ಪದವಿ ಹಂತದಲ್ಲಿಯೂ ಚಿನ್ನದ ಪದಕ ಪಡೆದಿದ್ದು ವಿದ್ಯಾಸಂಸ್ಥೆಗೆ ಹೆಮ್ಮೆಯಾಗಿದೆ ಎಂದರು.
ಮುಖ್ಯಶಿಕ್ಷಕ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ, ಸಿಸ್ಟರ್ ಐಡಾ ಹಾಜರಿದ್ದರು.