ಶಿಕ್ಷಕ, ವಿದ್ಯಾರ್ಥಿ ವೃಂದದ ಪರಿಶ್ರಮದಿಂದ ಕೀರ್ತಿ

Mul_hard work
Published on

ವಿಜಯವಾಣಿ ಸುದ್ದಿಜಾಲ ಹಳೆಯಂಗಡಿ

ಶಿಕ್ಷಕ ವೃಂದದ ಕಾಳಜಿ ಮತ್ತು ವಿದ್ಯಾರ್ಥಿಗಳ ಪರಿಶ್ರಮದಿಂದ ವಿದ್ಯಾರ್ಥಿಗಳ ಏಳಿಗೆ ಜತೆಗೆ ಶಾಲೆಗೆ ಉತ್ತಮ ಹೆಸರು ಬರಲು ಸಾಧ್ಯವಾಗಿದೆ ಎಂದು ಕಾಲೇಜಿನ ಹಳೇ ವಿದ್ಯಾರ್ಥಿ, ಪಡುಪಣಂಬೂರು ಸಹಕಾರಿ ವ್ಯಾವಸಾಯಿಕ ಸಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಮಕರ್ ಕದಿಕೆ ಹೇಳಿದರು.

ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸವಾರಂಭದಲ್ಲಿ ವಾತನಾಡಿದರು.

ಮೂಲ್ಕಿ ಸೀಮೆ ಅರಸ ಎಂ.ದುಗ್ಗಣ್ಣ ಸಾವಂತ ಧ್ವಜಾರೋಹಣಗೈದರು. ಕಾಲೇಜು ಪ್ರಾಂಶುಪಾಲೆ ಜಯಶ್ರೀ ಪಿ. ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) 2023-24ನೇ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾದ ಎಂಟು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಾವೀಣ್ಯತಾ ಬಹುವಾನ ನೀಡಲಾಯಿತು.

ಪ್ರತಿಭಾ ಪುರಸ್ಕಾರದ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುವಾನ ವಿತರಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್ ಸುವರ್ಣ ಮತ್ತು ಸದಸ್ಯ ಹೇಮಚಂದ್ರ ಶೆಟ್ಟಿಗಾರ್ ಉಪಸ್ಥಿತರಿದ್ದರು.

ಉಪನ್ಯಾಸಕ ಶಿವಾನಂದ ದೇಸಾಯಿ ಸ್ವಾಗತಿಸಿದರು. ಮಿಶೆಲ್ ಡಿ’ಸಿಲ್ವ ನಿರೂಪಿಸಿದರು. ಅನ್ನಪೂರ್ಣಾ ಕಾಮತ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net