

ಭದ್ರಾವತಿ: ತಾಲೂಕು ಕಸಾಪದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭಕ್ಕೆ ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಚಾಲನೆ ನೀಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ತಾಲೂಕು ಸಾಹಿತ್ಯ ಸಮ್ಮೇಳನದ ದಾನಿಗಳನ್ನು ಗೌರವಿಸಲಾಯಿತು.
ಕಸಾಪ ತಾಲೂಕು ಅಧ್ಯಕ್ಷ ಕೋಡ್ಲುಯಜ್ಞಯ್ಯ, ಕಾರ್ಯದರ್ಶಿಗಳಾದ ಎಚ್.ತಿಮ್ಮಪ್ಪ, ಎಂ.ಇ.ಜಗದೀಶ್, ನಗರಸಭೆ ಅಧ್ಯಕ್ಷೆ ಶ್ರುತಿ ವಸಂತ ಕುಮಾರ್, ಬಿಇಒ ಎ.ಕೆ.ನಾಗೇಂದ್ರಪ್ಪ, ಪ್ರೊ. ಡಾ. ವಿಜಯದೇವಿ, ಉದ್ಯಮಿ ಬಿ.ಕೆ.ಜಗನ್ನಾಥ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್.ಸುಧಾಮಣಿ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎಂ.ಆರ್.ರೇವಣಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಜಿ.ಸುರೇಶಯ್ಯ ಇತರರಿದ್ದರು.