ಈ ಬಾರಿ ಜೆಡಿಎಸ್ ಗೆಲುವು ನಿಶ್ಚಿತ

19mdkj4 - Copy
Published on

ವಿಜಯವಾಣಿ ಸುದ್ದಿಜಾಲ ಕುಶಾಲನಗರ

ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೧೫ ವರ್ಷದಿಂದ ಸಂಘಟನೆ ಮಾಡುತ್ತಾ ಬಂದಿದ್ದೇನೆ. ಮಡಿಕೇರಿ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ಜೆಡಿಎಸ್ ಸಂಭವನೀಯ ಅಭ್ಯರ್ಥಿ ನಾಪಂಡ ಮುತ್ತಪ್ಪ ವಿಶ್ವಾಸ ವ್ಯಕ್ತ ಪಡಿಸಿದರು.

ಕೂಡುಮಂಗಳೂರಿನಲ್ಲಿ ಗುರುವಾರ ಆಯೋಜಿಸಿದ್ದ ಜೆಡಿಎಸ್ ಹಳೆಯ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಕೆಲಸ ನಿರ್ವಹಿಸುತ್ತಿದ್ದೇವೆ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹಾಸನ ಹಾಲು ಒಕ್ಕೂಟ ನಿರ್ದೇಶಕ ಕೆ.ಕೆ. ಹೇಮಂತ್‌ಕುಮಾರ್ ಜೆಡಿಎಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ನಮ್ಮ ಅಭ್ಯರ್ಥಿ ನಾಪಂಡ ಎಂ. ಮುತ್ತಪ್ಪ ಮಡಿಕೇರಿ ಕ್ಷೇತ್ರ ದಲ್ಲಿ ಗೆಲುವು ಸಾಧಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದರು.

ಸಭೆಯಲ್ಲಿ ಜೆಡಿಎಸ್ ಮುಖಂಡರಾದ ರಾಮಚಂದ್ರು, ಶೇಖರ್, ಅಜ್ಜಳ್ಳಿ ರವಿ, ಕೃಷ್ಣೆಗೌಡ, ಭೀಮಣ್ಣ, ಕೃಷ್ಣಣ್ಣ. ಜಯಣ್ಣ. ಸರ್ಕಲ್ ಮಂಜು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net