ಸ್ವಚ್ಛಗೊಂಡ ಕುಡುಪು ದೇವಾಲಯ

KUDUPU
Published on

ಗುರುಪುರ: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸುಮಾರು ಎರಡು ತಿಂಗಳಿಂದ ಮುಚ್ಚಲಾಗಿದ್ದ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ ಸರ್ಕಾರದ ಆದೇಶದಂತೆ ಜು.5ರಂದು ಭಕ್ತರಿಗಾಗಿ ತೆರೆದುಕೊಳ್ಳಲಿದೆ.

ದೇವಾಲಯ ಮತ್ತು ಸುತ್ತಲ ಪ್ರದೇಶದಲ್ಲಿ ಕಳೆದ ಭಾನುವಾರ ಯುವಕರು ಶ್ರಮದಾನ ನಡೆಸಿ, ಸ್ವಚ್ಛತಾ ಕಾರ್ಯ ನಡೆಸಿದ್ದರು. ಅಲ್ಲದೆ ಪ್ರತಿನಿತ್ಯದಂತೆ ಭಾನುವಾರ ದೇವಾಲಯದೊಳಗೆ ಹಾಗೂ ಹೊರಗೆ ನೀರಿನಿಂದ ಸ್ವಚ್ಛಗೊಳಿಸಲಾಗಿದೆ. ಜು.5ರಿಂದ ದೇವಾಲಯಕ್ಕೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಅಂತರ ಕಾಪಾಡಿಕೊಳ್ಳಬೇಕು.

ದೇವಾಲಯದ ಎದುರು ಸೆಕ್ಯೂರಿಟಿ ಗಾರ್ಡ್ ಎಲ್ಲ ಭಕ್ತರಿಗೆ ಸ್ಯಾನಿಟೈಸರ್ ಬಳಸಲು ಸೂಚಿಸಲಿದ್ದಾರೆ. ಭಕ್ತರು ಸರ್ಕಾರದ ಆದೇಶ ಪಾಲಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net